
ಪ್ರಜಾವಾಣಿ ವಾರ್ತೆವಿರಾಜಪೇಟೆ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ ₹ 95 ಸಾವಿರನ್ನು ಸಮೀಪದ ಪೆರುಂಬಾಡಿಯಲ್ಲಿನ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು- ಕೇರಳ ಗಡಿಭಾಗವಾದ ಪೆರುಂಬಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿರುವಾಗ ಕೇರಳದ ಇರಿಟಿಯಿಂದ ಮೈಸೂರಿಗೆ ತೆರಳುತ್ತಿದ್ದ ಕಾರೊಂದರಲ್ಲಿ ನಗದು ಪತ್ತೆಯಾಗಿತ್ತು. ರಂಶೀದ್ ಎಂಬುವವರ ಬಳಿಯಿದ್ದ ದಾಖಲೆಯಿಲ್ಲದ ನಗದನ್ನು ವಶಕ್ಕೆ ಪಡೆದ ಅಧಿಕಾರಿಗಳು ಉಪ ಖಜಾನೆಗೆ ಒಪ್ಪಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ತಪಾಸಣೆ ಕೇಂದ್ರದಲ್ಲಿ ಶಿಕ್ಷಣ ಇಲಾಖೆಯ ವೆಂಕಟೇಶ್, ಕೃಷಿ ಇಲಾಖೆಯ ಅಶ್ವಿನ್‌ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.