ADVERTISEMENT

ಚಿಕ್ಕ ಅಳುವಾರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 15:16 IST
Last Updated 5 ಜೂನ್ 2025, 15:16 IST
ಕುಶಾಲನಗರ ಸಮೀಪದ ಚಿಕ್ಕ ಅಳುವಾರ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಆವರಣದಲ್ಲಿ ಗುರುವಾರ  ವನಮಹೋತ್ಸವ‌ ಆಚರಿಸಲಾಯಿತು 
ಕುಶಾಲನಗರ ಸಮೀಪದ ಚಿಕ್ಕ ಅಳುವಾರ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಆವರಣದಲ್ಲಿ ಗುರುವಾರ  ವನಮಹೋತ್ಸವ‌ ಆಚರಿಸಲಾಯಿತು    

ಕುಶಾಲನಗರ: ಇಲ್ಲಿನ ಚಿಕ್ಕ ಅಳುವಾರದ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಆವರಣದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ  ಗುರುವಾರ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ  ವನಮಹೋತ್ಸವ ಹಮ್ಮಿಕೊಳ್ಳಲಾಗಿತ್ತು.

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ತಿಳಿಸಿದರು.ಸಂಸ್ಥೆಯ ನಿರ್ದೇಶಕ  ಎಂ.ಸಿ. ಶಿವಕುಮಾರ್,  ಸಿಬ್ಬಂದಿ ಗಿಡಗಳನ್ನು ನೆಟ್ಟರು.  ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವಲಯಾರಣ್ಯಾಧಿಕಾರಿ ಗಣೇಶ್‌ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT