ಕುಶಾಲನಗರ: ಕರ್ನಾಟಕ ಅರಣ್ಯ ಇಲಾಖೆ, ಮಡಿಕೇರಿ ಉಪ ವಿಭಾಗ ಹಾಗೂ ಸೋಮವಾರಪೇಟೆ ವಲಯದಿಂದ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹಾಗೂ ‘ತಾಯಿ ಹೆಸರಿನಲ್ಲಿ ಒಂದು ಗಿಡ ಅಭಿಯಾನ’ ಮತ್ತು ವನ ಮಹೋತ್ಸವವನ್ನು ಆಚರಿಸಲಾಯಿತು.
ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ಭಾರತ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಸಂವಿಧಾನ ಬದ್ಧವಾಗಿ ಬಂದಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರತಿಯೊಬ್ಬರೂ ಎತ್ತಿ ಹಿಡಿಯಬೇಕು’ ಎಂದು ಸಲಹೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕ ಬಸವರಾಜ ಶೆಟ್ಟಿ, ಶಿಕ್ಷಕ ಮೆ.ನಾ.ವೆಂಕಟನಾಯಕ್, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಖಜಾಂಚಿ ಉಮೇಶ್, ಉಪವಲಯ ಅರಣ್ಯ ಅಧಿಕಾರಿಗಳಾದ ಭರತ್, ಚಂದ್ರೇಶ್, ಲೋಹಿತ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಇದೇ ಸಂದರ್ಭ ವಿದ್ಯಾರ್ಥಿಗಳು ಪರಿಸರ ರಕ್ಷಣೆ ಹಾಗೂ ಪ್ರಜಾಪ್ರಭುತ್ವ ಮಹತ್ವ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.