ADVERTISEMENT

ಬೇಟೋಳಿ: ವೈದಿಕ ಶಿಬಿರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಮೇ 2025, 12:40 IST
Last Updated 15 ಮೇ 2025, 12:40 IST
ವಿರಾಜಪೇಟೆ ಸಮೀಪದ ಬೇಟೋಳಿ ರಾಮನಗರದಲ್ಲಿ ವೈದಿಕ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳು
ವಿರಾಜಪೇಟೆ ಸಮೀಪದ ಬೇಟೋಳಿ ರಾಮನಗರದಲ್ಲಿ ವೈದಿಕ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳು    

ವಿರಾಜಪೇಟೆ: ಸಮೀಪದ ಬೇಟೋಳಿ ರಾಮನಗರದ ಪುದುಪಾಡಿ ಅಯ್ಯಪ್ಪ ಸಭಾ ಭವನದಲ್ಲಿ ಇದೇ ಮೊದಲ ಬಾರಿಗೆ ಮಕ್ಕಳ ವೈದಿಕ ಶಿಬಿರಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಪುದುಪಾಡಿ ಅಯ್ಯಪ್ಪ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ.ಜಿ. ನಂದ ಬೋರ್ಕ್ರ್ ಹಾಗೂ ಗೀತಾ ಬೋರ್ಕರ್ ದಂಪತಿ ಶಿಬಿರಕ್ಕೆ ಚಾಲನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕ ರಾಜೇಶ್ ಭಟ್ ಅವರು ಶಿಬಿರದ ದಿನಚರಿ ಹಾಗೂ ಶಿಬಿರಾರ್ಥಿಗಳು ಪಾಲಿಸಬೇಕಾದ ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಶಿಬಿರದಲ್ಲಿ ಒಟ್ಟು 15 ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್, ವೇಣುಗೋಪಾಲ್ ಭಟ್, ಆಡಳಿತ ಮಂಡಳಿಯ ಅಧ್ಯಕ್ಷ ಸಂತೋಷ್ ಬಿ.ಪಿ, ಶೈಲೇಶ್ ಕಾಮತ್, ಶಾಂತಿಭೂಷಣ್ ಬೋರ್ಕರ್, ಜ್ಯೋತಿ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ಆರಂಭದಲ್ಲಿ ಗಣಪತಿ ಹಾಗೂ ಪುದುಪಾಡಿ ಅಯ್ಯಪ್ಪ ದೇವಸ್ಥಾನದಲ್ಲಿ ಪುರೋಹಿತರು ವಿಶೇಷ ಪೂಜೆಯನ್ನು ಸಲ್ಲಿಸಿದರು. ಶಿಬಿರವು ಒಟ್ಟು 4 ದಿನಗಳ ಕಾಲ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.