ADVERTISEMENT

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮೂರು ವಾಹನ ವಶ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 3:25 IST
Last Updated 24 ಮಾರ್ಚ್ 2020, 3:25 IST
ಕೊಡಗಿನಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ವಾಹನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು
ಕೊಡಗಿನಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ವಾಹನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು   

ಸುಂಟಿಕೊಪ್ಪ: ಕೊಡಗು ಜಿಲ್ಲೆಗೆ ’ಲಾಕ್‌ಡೌನ್’ ಆದೇಶ ಉಲ್ಲಂಘಿಸಿ ಕಾಫಿ ತೋಟಗಳಿಗೆ ಕಾರ್ಮಿಕರನ್ನು ಕೆಲಸಗಳಿಗೆ ಕರೆದೊಯ್ಯುತ್ತಿದ್ದ ಕೆಲವು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾಫಿ ತೋಟಗಳಲ್ಲಿ ಕಾಫಿ, ಕರಿಮೆಣಸು ಕೊಯ್ಲು ನಡೆಯುತ್ತಿದ್ದು ’ಲಾಕ್‌ಡೌನ್’ ಆದೇಶದ ಬಗ್ಗೆ ಅರಿವಿದ್ದರೂ ನಿರ್ಲಕ್ಷ್ಯ ತೋರಿದ ವಾಹನ ಚಾಲಕರು ಎಂದಿನಂತೆ ಸುಂಟಿಕೊಪ್ಪ, ನಾಕೂರು, ಕಂಬಿಬಾಣೆ, ಕೊಡಗರಹಳ್ಳಿ, ಬಸವನಹಳ್ಳಿ, ಗುಡ್ಡೆಹೊಸೂರು, ಕೊಪ್ಪ, ರಾಣಿಗೇಟ್ ವಿವಿಧೆಡೆಗಳಿಂದ ಜೀಪ್ ಸೇರಿದಂತೆ ಇನ್ನಿತರ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದರು. ಇದನ್ನು ಗಮನಿಸಿದ ಪಿಎಸ್‌ಐ ತಿಮ್ಮಪ್ಪ ಮತ್ತು ಗ್ರಾಮ ಪಂಚಾಯಿತಿ ಪಿಡಿಒ ವೇಣುಗೋಪಾಲ್ ಸಿಕ್ಕಿದ 3 ವಾಹನಗಳನ್ನು ತಡೆದು ತಮ್ಮ ವಶಕ್ಕೆ ತೆಗೆದುಕೊಂಡರು.

ವಾಹನಗಳನ್ನು ತಡೆದು ತಪಾಸಣೆ ನಡೆಸಿದಾಗ ಕಾರ್ಮಿಕರನ್ನು ಕರೆದ್ಯೊಯ್ಯುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು ಎಂದು ಪಿಎಸ್‌ಐ ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.