ADVERTISEMENT

ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ: ಲೇಖಕಿಯರಿಂದ ಕೃತಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 6:59 IST
Last Updated 17 ಜನವರಿ 2026, 6:59 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಡಿಕೇರಿ: ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ 2025-26ನೇ ಸಾಲಿನ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರುವ ಲೇಖಕಿಯರು 2020ರ ನಂತರ ತಾವು ರಚಿಸಿದ ಸೃಜನಶೀಲ, ಸಮಾಜಮುಖಿ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಬೇಕು.

ADVERTISEMENT

ಲಕೊಟೆಯ ಮೇಲೆ ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ’ ಎಂದು ಬರೆಯಬೇಕು. ‘ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ,ಸುದರ್ಶನ ವೃತ್ತ, ಮಡಿಕೇರಿ. ಮೊ: 94483 46276’ ವಿಳಾಸಕ್ಕೆ ಜ. 25ರ ಒಳಗಾಗಿ ತಲುಪಿಸಬೇಕು.

ಪ್ರಬಂಧ ಸ್ಪರ್ಧೆ ವಿಜೇತರು: ಪರಿಷತ್ತಿನ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ದತ್ತಿಯ ಆಶಯದಂತೆ ಕೊಡಗು ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ:

ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ತೃತೀಯ ಬಿ.ಸಿ.ಎ ವಿದ್ಯಾರ್ಥಿನಿ ಕೆ.ಆರ್.ಮನ ಪ್ರಥಮ, ಕೊಟ್ಟಮುಡಿಯ ಮರ್ಕಸ್ ಹಿದಾಯತ್ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಟಿ.ಎ.ಫಹಿನಾ ದ್ವಿತೀಯ, ಶ್ರೀಮಂಗಲ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಷಾ ಪಿ. ಆರ್ ಹಾಗೂ ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರೇಕ್ಷ ಜಿ.ಎಂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಮುಂದಿನ ಕಾರ್ಯಕ್ರಮದಲ್ಲಿ ಇವರಿಗೆ ಬಹುಮಾನ ಪುರಸ್ಕಾರ ನೀಡಿ ಗೌರವಿಸಲಾಗುವುದು. ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ 35 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಎಂದು ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.