ADVERTISEMENT

ವಿನಯ್ ಸೋಮಯ್ಯ ಆತ್ಮಹತ್ಯೆ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2025, 9:59 IST
Last Updated 4 ಏಪ್ರಿಲ್ 2025, 9:59 IST
<div class="paragraphs"><p>ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.</p></div>

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

   

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಇಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಬರೆದಿಟ್ಟಿರುವ ಮರಣಪತ್ರವನ್ನು ಗಂಭೀರವಾಗಿ ಪರಿಗಣಿಸಬೇಕು. ಅದರಲ್ಲಿ ಉಲ್ಲೇಖವಾಗಿರುವ ಎಲ್ಲರ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಅವರು ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಸಂಚಾರದಟ್ಟಣೆ ಉಂಟಾಯಿತು. ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಆತ್ಮಹತ್ಯೆ ಬೆಂಗಳೂರಿನಲ್ಲಿಯಾಗಿದ್ದು ಅಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲಿನ ಪೊಲೀಸರಿಗೆ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಮುಖಂಡರಾದ ಕೆ.ಜಿ.ಬೋಪಯ್ಯ, ಮಹೇಶ್ ಜೈನಿ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.