ADVERTISEMENT

ಆತ್ಮಹತ್ಯೆ ಮಾಡಿಕೊಂಡ ವಿನಯ್‌ ಸೋಮಯ್ಯ ಯಾರು?

ಕೊಡಗು ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಸ್ಥಾನದಲ್ಲಿರಲಿಲ್ಲ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2025, 23:55 IST
Last Updated 5 ಏಪ್ರಿಲ್ 2025, 23:55 IST
ವಿನಯ್‌ ಸೋಮಯ್ಯ 
ವಿನಯ್‌ ಸೋಮಯ್ಯ    

ಮಡಿಕೇರಿ: ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿನಯ್ ಸೋಮಯ್ಯ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದವರು. ಅವರು ಕೊಡಗು ಜಿಲ್ಲಾ ಬಿಜೆಪಿ ಘಟಕದಲ್ಲಿ ಯಾವುದೇ ಜವಾಬ್ದಾರಿ ಹೊಂದಿರಲಿಲ್ಲ. ಆದರೆ, ಅವರ ತಂದೆ ಸಾಕಷ್ಟು ಹಿಂದೆ ಬಿಜೆಪಿಯ ಹೋಬಳಿ ಘಟಕದ ಅಧ್ಯಕ್ಷರಾಗಿದ್ದರು. ಅವರ ನಾಲ್ವರು ಪುತ್ರರಲ್ಲಿ ವಿನಯ್ ಒಬ್ಬರು.

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ 15 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಪತ್ನಿಯೊಂದಿಗೆ ವಾಸವಿದ್ದರು. ಹಬ್ಬ, ಜಾತ್ರೆ ಮೊದಲಾದ ಪ್ರಮುಖ ಸಂದರ್ಭದಲ್ಲಿ ಮಾತ್ರವೇ ಊರಿಗೆ ಬಂದು ಹೋಗುತ್ತಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರು.

ಅವರ ವಿರುದ್ಧ ಫೆಬ್ರುವರಿಯಲ್ಲಿ ಪ್ರಕರಣ ದಾಖಲಾಗುವ ಕೆಲವೇ ದಿನಗಳಿಗೂ ಮುಂಚೆ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ ಅಡ್ಮಿನ್ ಆಗಿದ್ದರು. ಈ ಗ್ರೂಪ್‌ನಲ್ಲಿ ಕೊಡಗಿನ ಸಮಸ್ಯೆಗಳು ಮತ್ತು ಕುಂದುಕೊರತೆಗಳ ಬಗ್ಗೆ ಚರ್ಚೆಯಾಗುತ್ತಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.