ವಿನಯ್ ಸೋಮಯ್ಯ
ಬೆಂಗಳೂರು: ನಾಗವಾರದ ಬಿಜೆಪಿ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿನಯ್ ಸೋಮಯ್ಯ ಅವರ ಮೃತದೇಹವನ್ನು ಇಂದು ಸಂಜೆಯೇ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮಕ್ಕೆ ಕೊಂಡೊಯ್ಯುವ ಸಾಧ್ಯತೆಯಿದೆ.
ಮರಣೋತ್ತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಖಂಡಿಸಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಭದ್ರತೆ ಹೆಚ್ಚಿಸುವಂತೆ ಅಲ್ಲಿನ ಎಸ್‌ಪಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.