
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ವಿರಾಜಪೇಟೆ: ತಾಲ್ಲೂಕಿನ ಅರಮೇರಿ ಗ್ರಾಮದ ನಿವಾಸಿ ನಂಜಪ್ಪ (64) ಎಂಬುವವರು ಮಂಗಳವಾರ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಇವರು ಒಬ್ಬರೇ ವಾಸಿಸುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮದೇ ಗದ್ದೆಯಲ್ಲಿ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿವೈಎಸ್‌ಪಿ ಮಹೇಶ್‌ಕುಮಾರ್, ಇನ್‌ಸ್ಪೆಕ್ಟರ್ ಅನೂಪ್ ಮಾದಪ್ಪ, ಸಬ್‌ಇನ್‌ಸ್ಪೆಕ್ಟರ್‌ಗಳಾದ ಲತಾ ಮತ್ತು ವಾಣಿಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.