ADVERTISEMENT

ವಿರಾಜಪೇಟೆ | ‘ಜಾಗೃತಿಯಿಂದ ಮಾತ್ರ ಎಚ್‌ಐವಿ ನಿರ್ಮೂಲನೆ ಸಾಧ್ಯ’

ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಡಾ.ಸನತ್ ಕುಮಾರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 5:29 IST
Last Updated 5 ಡಿಸೆಂಬರ್ 2025, 5:29 IST
ಸಭಾ ಕಾರ್ಯಕ್ರಮಕ್ಕು ಮೊದಲು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳವಾರ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಜಾಗೃತಿ ಜಾಥ ನಡೆಯಿತು.
ಸಭಾ ಕಾರ್ಯಕ್ರಮಕ್ಕು ಮೊದಲು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳವಾರ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಜಾಗೃತಿ ಜಾಥ ನಡೆಯಿತು.   

ವಿರಾಜಪೇಟೆ: ಏಡ್ಸ್ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಸಂಪೂರ್ಣ ನಿರ್ಮೂಲನೆ ಸಾಧ್ಯ ಎಂದು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿ ಡಾ.ಸನತ್ ಕುಮಾರ್ ತಿಳಿಸಿದರು.

ಕೊಡಗು ಜಿಲ್ಲಾ ಪಂಚಾಯಿತಿ, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ 2025 ಅಂಗವಾಗಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ಜನತೆಯು ತಾವು ಜಾಗೃತರಾಗುವ ಜೊತೆಗೆ ಬೇರೆಯವರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು. ಏಡ್ಸ್‌ನ ಆರಂಭಿಕ ರೋಗ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ವಿದ್ಯಾರ್ಥಿಗಳು ಸಾಮಾಜಿಕ ಜಾಗೃತಿಯನ್ನು ಮೂಡಿಸಬೇಕಿದೆ ಎಂದರು.

ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಫಾ. ಮದಲೈ ಮುತ್ತು ಮಾತನಾಡಿ, ‘ಪ್ರತಿಯೊಬ್ಬರೂ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಜೀವಿಸಬೇಕು. ಮಾನವ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ಮರೆಯಬಾರದು. ಉತ್ತಮ ಸಮಾಜಮುಖಿ ಚಟುವಟಿಕೆಗಳಿಂದ ಜೀವನವನ್ನು ನಡೆಸಬೇಕು’ ಎಂದರು.

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕಿ ಸುನಿತಾ ಮುತ್ತಣ್ಣ ಮಾತನಾಡಿ, ‘ಉತ್ತಮ ಆರೋಗ್ಯದಿಂದ ಸ್ವಾಸ್ಥ ಸಮಾಜದ ನಿರ್ಮಾಣವಾಗುತ್ತದೆ. ಪ್ರತಿಯೊಬ್ಬರಲ್ಲಿಯೂ ಏಡ್ಸ್ ಕುರಿತು ಸ್ವ ಜಾಗೃತಿ ಮೂಡಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಮಾತನಾಡಿ, ‘ಆರೋಗ್ಯವನ್ನು ಉತ್ತಮವಾಗಿ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಜೊತೆಗೆ, ಸಮುದಾಯದಲ್ಲಿಯೂ ಸಹ ಜಾಗೃತಿ ಮೂಡಿಸಬೇಕಿದೆ’ ಎಂದರು.

ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಅವರು ಮಾತನಾಡಿದರು.

ಕಾಲೇಜಿನ ಪ್ರಾಧ್ಯಾಪಕಿ ಪ್ರತಿಮಾ ಹರೀಶ್ ರೈ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ, ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಚಿಟ್ಟಿಯಪ್ಪ, ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದ ಐಸಿಟಿಸಿ ವಿಭಾಗದ ಆಪ್ತಸಮಾಲೋಚಕ ಚಂದ್ರಶೇಖರ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಸೆಂಟ್ ಆನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಜಾಗೃತಿ ಜಾಥ ನಡೆಸಿದರು.

ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉತ್ತಮ ಆರೋಗ್ಯದಿಂದ ಸ್ವಾಸ್ಥ ಸಮಾಜದ ನಿರ್ಮಾಣ ನಡೆಯಿತು ಜಾಗೃತಿ ಜಾಥಾ ಜವಾಬ್ದಾರಿಯುತವಾಗಿ ವರ್ತಿಸಲು ಕರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.