ವಿರಾಜಪೇಟೆ: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾ ಪುರುಷರನ್ನು ಸ್ಮರಿಸುವುದರೊಂದಿಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ಪಟ್ಟಣದ ತಾಲ್ಲೂಕು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶುಕ್ರವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಇತಿಹಾಸ ತಿರುಚುವ ಕೆಲಸ ಇಂದು ಸಮಾಜದಲ್ಲಿ ಕೆಲವರಿಂದ ಆಗುತ್ತಿದೆ. ಇದರಿಂದ ಬಲಿದಾನಗೈದ ಮಹನೀಯರ ಕೊಡುಗೆ ಮರೆತಂತಾಗುತ್ತದೆ. ಸ್ವಾತಂತ್ರ್ಯ ಸೇನಾನಿಗಳನ್ನು ಗೌರವಿಸಬೇಕು. ಎಲ್ಲ ವರ್ಗದವರಿಗೂ ಸಮಾಜದಲ್ಲಿ ನ್ಯಾಯ ದೊರೆಯಬೇಕು. ಆಗ ಮಾತ್ರ ನಿಜವಾದ ಸ್ವತಂತ್ರ ಸಿಕ್ಕಿದಂತಾಗುತ್ತದೆ’ ಎಂದರು.
ತಹಶೀಲ್ದಾರ್ ಪ್ರವೀಣ್ ಕುಮಾರ್ ಮಾತನಾಡಿ, ‘ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿಕೊಳ್ಳಬೇಕಿದೆ. ಪ್ರತಿಯೊಬ್ಬ ಭಾರತೀಯನು ತಾನು ಭಾರತೀಯ ಎನ್ನುವುದಕ್ಕೆ ಹೆಮ್ಮೆಪಡಬೇಕು’ ಎಂದರು.
ವೇದಿಕೆಯಲ್ಲಿ ಪುರಸಭೆಯ ಅಧ್ಯಕ್ಷೆ ಎಂ.ಕೆ.ದೇಚಮ್ಮ, ಡಿವೈಎಸ್ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ರಾಜೇಶ್, ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಭಾಗವಹಿಸಿದ್ದರು.
ಮಾಜಿ ಯೋಧರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಸಾರುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಿದರು.
ನಿವೃತ್ತ ಸೈನಿಕರಿಗೆ ಸನ್ಮಾನ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಸ್ವಾತಂತ್ರ್ಯ ಯೋಧರ ಬಲಿದಾನ ಸ್ಮರಿಸಲು ಮನವಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.