ADVERTISEMENT

ಪರಿಸರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 5:28 IST
Last Updated 6 ಜೂನ್ 2025, 5:28 IST
ವಿರಾಜಪೇಟೆಯ ಸೇಂಟ್ ಆನ್ಸ್ ಕಾಲೇಜಿನಲ್ಲಿ ಗುರುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ವಿರಾಜಪೇಟೆಯ ಸೇಂಟ್ ಆನ್ಸ್ ಕಾಲೇಜಿನಲ್ಲಿ ಗುರುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.   

ವಿರಾಜಪೇಟೆ : ಪಟ್ಟಣದ ಸೇಂಟ್ ಆನ್ಸ್ ಕಾಲೇಜಿನಲ್ಲಿ ಗುರುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪದವಿ ಕಾಲೇಜಿನ ಎನ್. ಎಸ್.ಎಸ್. ಘಟಕ, ಯುವ ರೆಡ್ ಕ್ರಾಸ್ ಘಟಕ, ನೇಚರ್ ಕ್ಲಬ್ ಹಾಗೂ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ  ಗಿಡಗಳನ್ನು ನೆಟ್ಟು ಚಾಲನೆ ನೀಡಲಾಯಿತು.

 ಕಾಲೇಜಿನ ವ್ಯವಸ್ಥಾಪಕ , ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು  ಮಾತನಾಡಿ,  ಗಿಡಗಳನ್ನು ನೆಟ್ಟು ಬೆಳೆಸಿದರೆ  ಗಾಳಿಯು ಉತ್ತಮವಾಗಿರುತ್ತದೆ. ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸಲು ಎಲ್ಲರೂ ಪಣ ತೊಡಬೇಕು ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ  ಮಾತನಾಡಿ,  ಸ್ವಚ್ಛ ಪರಿಸರದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು.   ಯುವ ಜನರು ಜನರಲ್ಲಿ  ಪರಿಸರ ಜಾಗೃತಿಯನ್ನು ಮೂಡಿಸಬೇಕೆಂದರು.

 ಎನ್.ಎಸ್.ಎಸ್ ಅಧಿಕಾರಿ ಬಿ. ಎನ್. ಶಾಂತಿಭೂಷಣ್ ಮಾತನಾಡಿದರು. ಪದವಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ., ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ದೈಹಿಕ ಶಿಕ್ಷಣ ನಿರ್ದೇಶಕ ಬಿ.ವಿ. ರಾಜ ರೈ, ಉಪನ್ಯಾಸಕರು, ಕಾಲೇಜಿನ ಎನ್.ಎಸ್.ಎಸ್, ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಾ ವಿದ್ಯಾರ್ಥಿಗಳು, ಪಿ.ಯು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.