ವಿರಾಜಪೇಟೆ: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕಿ ಹೇಮಾ ಅವರು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಅವರು ಮಾತನಾಡಿ, ‘ಜಾಗತಿಕ ನಾಯಕತ್ವದಲ್ಲಿ ಭಾರತೀಯ ಯುವಕರು ತನ್ನದೆಯಾದ ಕೊಡುಗೆಯನ್ನು ಕೊಡುತ್ತಿದ್ದು ಎಲ್ಲಾ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಳ್ಳುವುದರ ಮೂಲಕ ವಿಕಸಿತ ಭಾರತಕ್ಕೆ ಮುನ್ನಡಿಯಾಗಿದ್ದಾರೆ. ವಿಕಸಿತ ಭಾರತದ ಗುರಿ ತಲುಪಲು ವಿಜ್ಞಾನದ ಪಾತ್ರ ಅತೀ ಮಹತ್ವದ್ದಾಗಿದೆ’ ಎಂದರು.
ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದ ಉಪನ್ಯಾಸಕರಾದ ನಿಶಾ, ಜೋಶಿಕಾ, ಸೌಮ್ಯಾ ಉಪಸ್ಥಿತರಿದ್ದರು.
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.