ADVERTISEMENT

ವಿರಾಜಪೇಟೆ: ಮತಗಟ್ಟೆಗೆ ತೆರಳಿದ ಸಿಬ್ಬಂದಿ

ವಿರಾಜಪೇಟೆ: ಕ್ಷೇತ್ರದಲ್ಲಿ ಒಟ್ಟು 273 ಮತಗಟ್ಟೆ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2024, 13:56 IST
Last Updated 25 ಏಪ್ರಿಲ್ 2024, 13:56 IST
 ವಿರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ಮತಗಟ್ಟಗೆ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ನಿಯೋಜಿಸಿದ್ದ ವಾಹನಗಳು 
 ವಿರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ಮತಗಟ್ಟಗೆ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ನಿಯೋಜಿಸಿದ್ದ ವಾಹನಗಳು    

ವಿರಾಜಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಗುರುವಾರ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ ನಡೆಯಿತು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಮತಯಂತ್ರಗಳು ಸೇರಿದಂತೆ ಅಗತ್ಯ ಪರಿಕರಗಳು ಹಾಗೂ ಚುನಾವಣಾ ಸಿಬ್ಬಂದಿ ನಿಯೋಜನಾ ಕಾರ್ಯ ನಡೆಯಿತು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಮತಗಟ್ಟೆ ಅಧಿಕಾರಿಗಳು ಮಸ್ಟರಿಂಗ್ ಕೇಂದ್ರದಿಂದ ಚುನಾವಣೆ ನಡೆಸಲು ಬೇಕಾದ ಅಗತ್ಯ ಪರಿಕರಗಳನ್ನು ಪಡೆದುಕೊಂಡು ಮಧ್ಯಾಹ್ನದ ಊಟದ ಬಳಿಕ ನಿಯೋಜಿತ ಮತಗಟ್ಟೆಗಳತ್ತ ತೆರಳಿದರು.

ತಹಶೀಲ್ದಾರ್ ರಾಮಚಂದ್ರ ಮಾಹಿತಿ ನೀಡಿ, ಕ್ಷೇತ್ರದಲ್ಲಿ ಒಟ್ಟು 273 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸಲು ಮೀಸಲು ಸಿಬ್ಬಂದಿ ಸೇರಿದಂತೆ ಒಟ್ಟು 1,250 ಸಿಬ್ಬಂದಿ ನಿಯೋಜಿಸಲಾಗಿದೆ. ವಿಶೇಷ ಎಂದರೆ ಈ ಬಾರಿ 800 ಜನ ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಸಿಬ್ಬಂದಿ ಮತಗಟ್ಟೆಗೆ ತೆರಳಲು 100 ಮಾರ್ಗಗಳನ್ನು ಗುರುತಿಸಲಾಗಿದೆ. ಮತಯಂತ್ರಗಳು, ಪರಿಕರಗಳು ಸೇರಿದಂತೆ ಸಿಬ್ಬಂದಿಗಳನ್ನು ಮತದಾನ ಕೇಂದ್ರಕ್ಕೆ ಕರೆದುಕೊಂಡು ಹೋಗಲು 41 ಬಸ್‌, 33 ಮಿನಿ ಬಸ್‌, 40 ಜೀಪುಗಳು ಸೇರಿದಂತೆ 114 ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ADVERTISEMENT

ಮಹಿಳೆಯರಿಗಾಗಿ ಪಿಂಕ್ ಮತಗಟ್ಟೆ ಮತ್ತು ಸಂತ ಅನ್ನಮ್ಮ ಶಾಲೆಯಲ್ಲಿ ಅಂಗವಿಕಲರಿಗಾಗಿ ಮತದಾನ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿ ರ‍್ಯಾಂಪ್‌ ಗಾಲಿ ಕುರ್ಚಿಗಳು ಸೇರಿದಂತೆ ಎಲ್ಲಾ ವ್ಯವಸ್ಥೆ ಇರಲಿದೆ. ಜೊತೆಗೆ ಅಗತ್ಯ ಬಿದ್ದರೆ ಇವರನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಏ.26ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ನಡೆಯುವ ಮತದಾನದಲ್ಲಿ ಮತದಾರರು ತಪ್ಪದೆ ಮತ ಚಲಾಯಿಸುವಂತೆ ಅವರು ಮನವಿ ಮಾಡಿದರು.

ವಿರಾಜಪೇಟೆ ಡಿ.ವೈ.ಎಸ್.ಪಿ ಮೋಹನ್ ಕುಮಾರ್ ಅವರು ಮಾತನಾಡಿ, ಚುನಾವಣ ಕರ್ತವ್ಯಕ್ಕಾಗಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಅತಿ ಸೂಕ್ಷ್ಮ ಮತಗಟ್ಟೆ ಮತ್ತು ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು ಅಗತ್ಯ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. 27 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನಕ್ಕೆ ಅನೂಕೂಲವಾಗುವಂತೆ 450 ವಿವಿಧ ಹಂತದ ಪೊಲೀಸ್ ಸಿಬ್ಬಂದಿ ಮತ್ತು ಮೀಸಲು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿನ ಮಸ್ಟರಿಂಗ್ ಕೇಂದ್ರದಿಂದ ಗುರುವಾರ ಚುನಾವಣಾ ಪರಿಕರಗಳನ್ನು ಪಡೆದುಕೊಂಡ ಚುನಾವಣಾ ಸಿಬ್ಬಂದಿಗಳು ಮತದಾನ ಕೇಂದ್ರದತ್ತ ತೆರಳಿದರು.
ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿನ ಮಸ್ಟರಿಂಗ್ ಕೇಂದ್ರದಿಂದ ಗುರುವಾರ ಚುನಾವಣಾ ಪರಿಕರಗಳನ್ನು ಪಡೆದುಕೊಂಡ ಚುನಾವಣಾ ಸಿಬ್ಬಂದಿ ಮತದಾನ ಕೇಂದ್ರದತ್ತ ತೆರಳಿದರು
 ವಿರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ಮತಗಟ್ಟಗೆ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ನಿಯೋಜಿಸಿದ್ದ ವಾಹನಗಳು 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.