ADVERTISEMENT

ಮಂಜಾಟ್ ಕಾಲೊನಿ ನಿವಾಸಿಗಳಿಂದ ಮತದಾನ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2024, 7:24 IST
Last Updated 19 ಏಪ್ರಿಲ್ 2024, 7:24 IST
ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಪಂಚಾಯಿತಿಗೆ ಒಳಪಟ್ಟ ಮಂಜಾಟ್ ಕಾಲೊನಿ ರಸ್ತೆಯಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ ಕಾಲೊನಿ ನ ನಿವಾಸಿಗಳು
ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಪಂಚಾಯಿತಿಗೆ ಒಳಪಟ್ಟ ಮಂಜಾಟ್ ಕಾಲೊನಿ ರಸ್ತೆಯಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ ಕಾಲೊನಿ ನ ನಿವಾಸಿಗಳು   

ನಾಪೋಕ್ಲು: ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಪಂಚಾಯಿತಿಗೆ ಒಳಪಟ್ಟ ಮಂಜಾಟ್ ಕಾಲೊನಿ ನಿವಾಸಿಗಳು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಮಂಜಾಟ್ ಕಾಲೊನಿ ರಸ್ತೆಯಲ್ಲಿಯೇ ಬಹಿಷ್ಕಾರದ ಬ್ಯಾನರ್ ಅಳವಡಿಸಿದ ನಿವಾಸಿಗಳು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾನವನ್ನೇ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ರಸ್ತೆ ಸಂಪರ್ಕವಿಲ್ಲದ ಕಾಲೊನಿಯ ಮಂದಿ ನಮ್ಮ ಕಾಲೊನಿಗೆ ಮತ ಕೇಳಲು ಯಾರೂ ಬರುವುದು ಬೇಡ ಎನ್ನುತ್ತಿದ್ದಾರೆ. ಕಾಲೊನಿ ರಸ್ತೆಯಲ್ಲಿಯೇ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.

ಪೇರೂರು ಗ್ರಾಮದ ಮಂಜಾಟ್ ಕಾಲೊನಿಗೆ ಸೂಕ್ತ ಸಂಪರ್ಕ ವ್ಯವಸ್ಥೆಯಿಲ್ಲ. ಸೇತುವೆ ಕುಸಿದು ಬೀಳುವ ಹಂತದಲ್ಲಿದೆ. ರಸ್ತೆ ಡಾಂಬರು ಕಂಡಿಲ್ಲ. ಇರುವ ಕಲ್ಲುಮುಳ್ಳುಗಳ ಕಚ್ಚಾ ರಸ್ತೆ ಮಳೆಗಾಲದಲ್ಲಿ ಇಬ್ಭಾಗವಾಗುತ್ತದೆ. ಸುತ್ತಲೂ ಆನೆಗಳ ಹಾವಳಿ ಇದೆ. ಸಮಸ್ಯೆಗಳನ್ನೇ ಹೊತ್ತು ಮಲಗಿರುವ ಮಂದಿಗೆ ಇದೀಗ ಚುನಾವಣೆ ಬೆಡ ಎನ್ನಿಸಿದೆ. ಪರಿಶಿಷ್ಠ ಜಾತಿ– ಪಂಗಡ, ಹಿಂದುಳಿದ ವರ್ಗದ ಜನರು ವಾಸವಾಗಿದ್ದಾರೆ. ನಿವೃತ್ತರು ಮತ್ತು ಹಾಲಿ ಸೇವೆಯಲ್ಲಿರುವ ಸೈನಿಕರ ಮನೆಗಳೂ ಇವೆ. ದೇಶ ಸೇವೆ ಮಾಡುವ ಸೈನಿಕನ ಮನೆಗಳು ಸೇರಿದಂತೆ ಬಹುತೇಕ ನಿವಾಸಿಗಳ ಮನೆಗೆ ವಿದ್ಯುತ್ ಸಂಪರ್ಕವಿಲ್ಲ. ವಿದ್ಯುತ್ ಇಲ್ಲದ, ರಸ್ತೆಯಿಲ್ಲದ, ನೀರಿಲ್ಲ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಅಗತ್ಯವಿದೆ.

ADVERTISEMENT
ಮಡಿಕೇರಿ ತಾಲೂಕಿನ ಬಲ್ಲಮಾವಟಿ ಪಂಚಾಯಿತಿಗೆ ಒಳಪಟ್ಟ ಮಂಜಾಟ್ ಕಾಲೋನಿ ರಸ್ತೆಯಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ ಕಾಲೋನಿಯ ಮಂದಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.