ADVERTISEMENT

ವಯನಾಡ್‌ ಭೂಕುಸಿತ: ಕೊಡಗು ಜಿಲ್ಲೆಯ ಯುವತಿ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 15:06 IST
Last Updated 3 ಆಗಸ್ಟ್ 2024, 15:06 IST
ದಿವ್ಯಾ ಹಾಗೂ ಮಗ ಲಕ್ಷಿತ್
ದಿವ್ಯಾ ಹಾಗೂ ಮಗ ಲಕ್ಷಿತ್   

ಸಿದ್ದಾಪುರ: ವಯನಾಡು ಭೂಕುಸಿತ ದುರಂತದಲ್ಲಿ ನಾಪಯ್ತೆಯಾಗಿದ್ದ ಕೊಡಗಿನ ನೆಲ್ಯಹುದಿಕೇರಿ ಮೂಲದ ಯುವತಿ ಹಾಗೂ ಕುಟುಂಬದ ಮೃತದೇಹ ಶುಕ್ರವಾರ ಪತ್ತೆಯಾಗಿದೆ.

ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿಯ ನಲ್ವತ್ತೇಕರೆ ನಿವಾಸಿ ಪೊನ್ನಮ್ಮ ಎಂಬವರ ಮಗಳು ದಿವ್ಯಾ (35) ಚೂರಲ್ ಮಲ ಗೆ ವಿವಾಹವಾಗಿದ್ದರು. ಭೂಕುಸಿತದಲ್ಲಿ ದಿವ್ಯಾ ಸೇರಿದಂತೆ ಕುಟುಂಬದ 9 ಮಂದಿ ನಾಪತ್ತೆಯಾಗಿದ್ದರು. ಮಗಳು ಹಾಗೂ ಕುಟುಂಬಸ್ಥರನ್ನು ಹುಡುಕಿಕೊಡುವಂತೆ ಪೊನ್ನಮ್ಮ ಮನವಿ ಮಾಡಿದ್ದರು. ಶುಕ್ರವಾರ ಸಂಜೆ ಕುಟುಂಬದ 9 ಮಂದಿಯ ಪೈಕಿ 8 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ದಿವ್ಯಾ ಹಾಗೂ‌ ಮಗ ಲಕ್ಷಿತ್ ಮೃತದೇಹ ಒಟ್ಟಿಗೆ ಪತ್ತೆಯಾಗಿದೆ. ದಿವ್ಯಾ ವಯನಾಡುವಿನ ಮಿಮ್ಸ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.