ಮಡಿಕೇರಿ: ಸಾಹಿತಿ ನಾ. ಡಿಸೋಜ ಅವರು ಮಡಿಕೇರಿಯಲ್ಲಿ 2014 ರಲ್ಲಿ ನಡೆದಿದ್ದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಶಸ್ವಿ ಸಮ್ಮೇಳನಕ್ಕೆ ಕಾರಣಕರ್ತರಾಗಿದ್ದರು.
ಅವರ ಹೆಸರಿನಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನೆನಪಿಗೋಸ್ಕರ ದತ್ತಿ ನಿಧಿ ಸ್ಥಾಪಿಸಿದ್ದು, ಮಕ್ಕಳ ಕಥೆ ನಾಟಕಕ್ಕೆ ಸಂಬಂಧಿಸಿದಂತೆ 10 ವರ್ಷಗಳಿಂದ ದತ್ತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.
ಜ. 6ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿಯ ಜೂನಿಯರ್ ಕಾಲೇಜ್ ಆವರಣದಲ್ಲಿರುವ ಪ್ರೌಢಶಾಲಾ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.