ಸುಂಟಿಕೊಪ್ಪ: ಏಳನೇ ಹೊಸಕೋಟೆ ಗ್ರಾಮ ಪಂಚಾಯಿತಿಗೆ ಸೇರಿದ ಮೆಟ್ನಳ್ಳ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಗುರುವಾರ ಬೆಳಿಗ್ಗೆ 6 ಗಂಟೆಗೆ ಸುಮಾರಿಗೆ ಕಾಡಾನೆಯೊಂದು ರಾಜಾರೋಷವಾಗಿ ನಡೆದು ಹೋಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಭಯಭೀತರಾದರು.
ಆನೆಕಾಡು ಅರಣ್ಯ ಬದಿಯಲ್ಲಿ ಹೋಗುತ್ತಿದ್ದ ಕಾಡಾನೆಯನ್ನು ಕಂಡು ನಾಯಿಗಳು ಬೊಬ್ಬಿಟ್ಟಿವೆ. ಇದನ್ನು ಗಮನಿಸಿದ ಸ್ಥಳೀಯರು ಮನೆಯಿಂದ ಹೊರಗೆ ಬಂದಾಗ ಮನೆಯ ಮುಂಭಾಗದಲ್ಲಿಯೇ ಕಾಡಾನೆ ಹೋಗುತ್ತಿರುವುದನ್ನು ಕಂಡು ಬೊಬ್ಬೆ ಹೊಡೆದಿದ್ದಾರೆ. ಆದರೂ ಭಯವಿಲ್ಲದೇ ಸಂಚರಿಸಿದೆ.
ತೋಟಗಳಲ್ಲಿ ಹಲಸಿನ ಹಣ್ಣಿನ ವಾಸನೆಗಳಿಗೆ ಕಾಡಾನೆಗಳು ತಿನ್ನಲು ಲಗ್ಗೆ ಇಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.