ಸೋಮವಾರಪೇಟೆ: ಪಟ್ಟಣಕ್ಕೆ ಹೊಂದಿಕೊಂಡಿರುವ ಹಾನಗಲ್ಲು ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಮೂರು ಕಾಡಾನೆಗಳು ಕಾಫಿ ತೋಟಕ್ಕೆ ನುಗ್ಗಿ ಕಾಫಿ ಗಿಡಗಳನ್ನು ತುಳಿದು ನಾಶ ಪಡಿಸಿದ ಘಟನೆ ನಡೆದಿದೆ.
ಗ್ರಾಮದ ಸುದರ್ಶನ್ ಕೌಶಿಕ್, ಎಚ್.ಆರ್.ನವೀನ್ ಮತ್ತು ಬಸಪ್ಪ ಎಂಬುವವರ ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆಗಳು ಕಾಫಿ, ಬಾಳೆ ಗಿಡಗಳನ್ನು ನಾಶ ಪಡಿಸಿವೆ. ಮರ ಹತ್ತಲು ಬಳಸುವ ಏಣಿಯನ್ನು ಧ್ವಂಸ ಮಾಡಿವೆ. ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.