ADVERTISEMENT

ನಾಪೋಕ್ಲು | ಕಾಡಾನೆಗಳ ದಾಂಧಲೆ: ಕೃಷಿ ಫಸಲು ನಾಶ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 2:44 IST
Last Updated 25 ಜುಲೈ 2025, 2:44 IST
ಚೆಂಬು ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ತೆಂಗಿನ ಮರ ಮುರಿದುಬಿದ್ದಿರುವುದು 
ಚೆಂಬು ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ತೆಂಗಿನ ಮರ ಮುರಿದುಬಿದ್ದಿರುವುದು    

ನಾಪೋಕ್ಲು: ಚೆಂಬು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು ಕಾಡಾನೆಗಳ ದಾಂಧಲೆಗೆ ಬೆಳೆಗಳೆಲ್ಲ ನಾಶವಾಗಿದೆ. ಕೆಲವು ತಿಂಗಳಿಂದ ಕಾಡಾನೆಗಳ ಹಿಂಡು ಗ್ರಾಮದ ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟು ದಾಂಧಲೆ ನಡೆಸಿ ಬೆಳೆಗಳನ್ನು ನಾಶಪಡಿಸಿವೆ.

ಚೆoಬು ಗ್ರಾಮದ ಸುತ್ತ ಮುತ್ತಲಿನ ಊರುಬೈಲು, ದಬ್ಬಡ್ಕ ಆನೆಹಳ್ಳ, ಕಾಂತುಬೈಲುಗಳಲ್ಲಿ ಹಲವು ದಿನಗಳಿಂದ ಆನೆಗಳು ಕೃಷಿ ಜಾಗಕ್ಕೆ ನುಗ್ಗಿ ಹಾನಿ ಮಾಡುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಚೆಂಬು ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ಅಡಿಕೆ ಗಿಡಗಳು ಧ್ವಂಸವಾಗಿವೆ 

ಕೃಷಿಯನ್ನೇ ನಂಬಿ ಜೀವನ ಮಾಡುತ್ತಿರುವ ಗ್ರಾಮದಲ್ಲಿ ಈ ರೀತಿ ಆನೆಗಳ ಹಾವಳಿಯಿಂದ ಕೃಷಿಕರು ಬಾರಿ ನಷ್ಟ ಅನುಭವಿಸುತ್ತಿದ್ದು, ಸಂಬಂಧ ಪಟ್ಟ ಅರಣ್ಯ ಅಧಿಕಾರಿಗಳು ಇತ್ತ ಗಮನ ಹರಿಸಿ ಆನೆಯನ್ನು ಕಾಡಿಗೆ ಅಟ್ಟುವ ಕೆಲಸ ಆಗಬೇಕಾಗಿದೆ. ಶಾಲಾ ಮಕ್ಕಳು ಹೋಗುವ ದಾರಿಯಲ್ಲಿ ಆನೆಗಳು ಕಂಡುಬರುತ್ತಿದ್ದು ಇದರಿಂದ ಅನಾಹುತ ನಡೆಯುವ ಸಂಭವ ಇದ್ದು ಆದಷ್ಟು ಬೇಗ ಆನೆಯನ್ನು ಕಾಡಿಗೆ ಓಡಿಸುವ ಕಾರ್ಯ ಆಗಬೇಕಾಗಿದೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ, ಸೂಕ್ತ ಕ್ರಮ ಕೈಗೊಂಡು ಕಾಡಾನೆಗಳು ಗ್ರಾಮಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಕಾಡಾನೆ ದಾಳಿಯಿಂದ ನಷ್ಟ ಹೊಂದಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.