ADVERTISEMENT

ಮನುಷ್ಯ-ಪ್ರಾಣಿ ಸಂಬಂಧ ಸಂವೇದನಾಶೀಲ

ಚಿಕ್ಕ ಅಳುವಾರ: ವನ್ಯಜೀವಿ ಪ್ರಾಣಿಜನ್ಯರೋಗಗಳು ಕುರಿತು ಕಾರ್ಯಾಗಾರದಲ್ಲಿ ಪ್ರೊ.ಅಶೋಕ ಸಂಗಪ್ಪ ಆಲೂರ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 5:21 IST
Last Updated 12 ಜುಲೈ 2025, 5:21 IST
ಕುಶಾಲನಗರ ಸಮೀಪದ ಚಿಕ್ಕ ಅಳುವಾರ ಕೊಡಗು ವಿ.ವಿ ಸಭಾಂಗಣದಲ್ಲಿ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ವನ್ಯಜೀವಿ: ಪ್ರಾಣಿಜನ್ಯರೋಗಗಳು ವಿಷಯದ ಕುರಿತಾ ಕಾರ್ಯಾಗಾರವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಉದ್ಘಾಟಿಸಿದರು 
ಕುಶಾಲನಗರ ಸಮೀಪದ ಚಿಕ್ಕ ಅಳುವಾರ ಕೊಡಗು ವಿ.ವಿ ಸಭಾಂಗಣದಲ್ಲಿ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ವನ್ಯಜೀವಿ: ಪ್ರಾಣಿಜನ್ಯರೋಗಗಳು ವಿಷಯದ ಕುರಿತಾ ಕಾರ್ಯಾಗಾರವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಉದ್ಘಾಟಿಸಿದರು    

ಕುಶಾಲನಗರ: ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧ ಸಂವೇದನಾಶೀಲವಾದುದು. ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಹೇಳಿದರು.

ಬೀದರ್‌ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಡಗು ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಹಾಗೂ ಕೊಡಗು ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಜ್ಞಾನ ಕಾವೇರಿ ಕೇಂದ್ರದ ಸಭಾಂಗಣದಲ್ಲಿ ವಿಶ್ವ ಪ್ರಾಣಿ-ಜನ್ಯರೋಗಗಳ ಕುರಿತು ಹಮ್ಮಿಕೊಂಡಿದ್ದ ‘ವನ್ಯಜೀವಿ: ಪ್ರಾಣಿಜನ್ಯರೋಗಗಳು’ ವಿಷಯದ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಹರಡುವ ಪ್ರಾಣಿಜನ್ಯ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 6 ರಂದು ಪ್ರಾಣಿಜನ್ಯ ದಿನ ಆಚರಿಸಲಾಗುತ್ತದೆ. ಪಶುವೈದ್ಯಕೀಯ ವೃತ್ತಿಯು ಪ್ರಾಣಿಗಳ ಆರೋಗ್ಯ ಮತ್ತು ಯೋಗಕ್ಷೇಮ ಹಾಗೂ ಸಾರ್ವಜನಿಕ ಆರೋಗ್ಯದ ರಕ್ಷಣೆಗೆ ಮೀಸಲಾಗಿರುವ ಒಂದು ಉದಾತ್ತ ಮತ್ತು ಅತ್ಯಗತ್ಯ ಕ್ಷೇತ್ರವಾಗಿದೆ. ಪಶು ವೈದ್ಯರು ಅನಾರೋಗ್ಯ ಪೀಡಿತ ಪ್ರಾಣಿಗಳಿಗೆ ಚಿಕಿತ್ಸೆ ನೀಡುವುದಷ್ಟೇ ಅಲ್ಲದೇ ವನ್ಯಜೀವಿಗಳಿಂದ ಮನುಷ್ಯನಿಗೆ ಹರಡಬಹುದಾದ ಜನ್ಯರೋಗಗಳನ್ನು ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ADVERTISEMENT

ಕೊಡಗು ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಎಂ.ಸಿ.ಶಿವಕುಮಾರ್ ಮಾತನಾಡಿ, ಏಕ ಆರೋಗ್ಯ ಎನ್ನುವುದು ಮಾನವನ ಆರೋಗ್ಯ, ಪ್ರಾಣಿಗಳ ಆರೋಗ್ಯ ಮತ್ತು ಪರಿಸರ ಆರೋಗ್ಯದ ಪರಸ್ಪರ ಸಂಬಂಧವನ್ನು ಗುರುತಿಸುವ ಸಹಯೋಗಿ ಮತ್ತು ಸಂಯೋಜಿತ ಪರಿಕಲ್ಪನೆಯಾಗಿದೆ. ಜನರ ಯೋಗ ಕ್ಷೇಮವು ಪ್ರಾಣಿಗಳ ಆರೋಗ್ಯ ಮತ್ತು ಅವುಗಳು ಹಂಚಿಕೊಳ್ಳುವ ಪರಿಸರ ವ್ಯವಸ್ಥೆಗಳೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸುರೇಶ ಎಂ. ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಹಾಸನದ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ನಾಗಪ್ಪ, ಸಹ ಪ್ರಾಧ್ಯಾಪಕರಾದ ಡಾ. ಪ್ರಲ್ಲಾದ್, ಡಾ.ಬಿ.ಸಿ. ಗಿರೀಶ್ ಕಾರ್ಯಗಾರದಲ್ಲಿ ವಿಷಯ ಮಂಡಿಸಿದರು.

ಕೊಡಗು ವಿವಿಯ ವಿವಿಧ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಕೊಡಗಿನ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು. ವಿದ್ಯಾರ್ಥಿನಿ ಶ್ರಮಿತಾ ಐಮುಡಿಯಂಡ ನಿರೂಪಿಸಿದರು. ಉಪನ್ಯಾಸಕ ಡಾ. ಜಮೀರ್ ಅಹಮದ್ ಸ್ವಾಗತಿಸಿದರು, ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯ ಸಿಬ್ಬಂದಿ ಎನ್.ಟಿ. ಪ್ರಶಾಂತ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.