
ಪ್ರಜಾವಾಣಿ ವಾರ್ತೆಸಿದ್ದಾಪುರ (ಕೊಡಗು ಜಿಲ್ಲೆ): ಇಲ್ಲಿನ ಹೊಸೂರು ಬೆಟ್ಟಗೇರಿಯಲ್ಲಿ ಬುಧವಾರ ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆ ಬೇಬಿ (55) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅವರು ಸಂಜೆ ವೇಳೆ ಕಾಫಿಯನ್ನು ಸಾಗಿಸುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದಾಪುರ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.