ಮಡಿಕೇರಿ: ಪಾಲಿಬೆಟ್ಟ ಸಮೀಪದ ಚೆನ್ನಯ್ಯನ ಕೋಟೆ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಕಾಡಾನೆ ದಾಳಿಗೆ ಸಿಲುಕಿ ಕಾತಯಿ (72 ) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಸಂಬಂಧಿಕರ ಮನೆಗೆ ತೆರಳಿದ್ದ ಇವರು ವಾಪಸ್ ಮನೆಗೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ತೆರಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.