ಸಿದ್ದಾಪುರ : ಇಲ್ಲಿನ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠ ಎಂಬಲ್ಲಿ ಕಾಡಾನೆ ದಾಳಿಗೆ ಸಿಲುಕಿ ಐಶಾ (63) ಎಂಬುವವರು ಸೋಮವಾರ ಮೃತಪಟ್ಟಿದ್ದಾರೆ.
ಮಠ ಗ್ರಾಮದ ನಿವಾಸಿಯಾದ ಇವರು ಸೋಮವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಸಮೀಪದ ಕಾಫಿ ತೋಟದಿಂದ ಕಾಡಾನೆಯೊಂದು ದಾಳಿ ನಡೆಸಿದೆ. ಈ ಸಂದರ್ಭ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.