ಕುಶಾಲನಗರ (ಕೊಡಗು ಜಿಲ್ಲೆ): ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡಾಂಚಿನ ಗ್ರಾಮ ಚಿನ್ನೇನಹಳ್ಳಿಯಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ ವೆಂಕಟಮ್ಮ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇವರು ಬಹಿರ್ದೆಸೆಗೆ ಹೋದಾಗ ಕಾಡಾನೆ ದಾಳಿ ನಡೆಸಿದೆ. ತಕ್ಷಣವೇ ಅವರನ್ನು
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.