ಮಡಿಕೇರಿ: ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾರ್ಚ್ 15ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಲಿದ್ದು, ಬಳಿಕ ಬೆಳಿಗ್ಗೆ 10 ಗಂಟೆ ಹೊತ್ತಿಗೆ ಇಲ್ಲಿನ ಕಾವೇರಿ ಹಾಲ್‌ನಲ್ಲಿ ನಡೆಯುವ ಬಿಜೆಪಿ ಹಿಂದುಳಿದ ಮೋರ್ಚಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾಪಂಡ ರವಿಕಾಳಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.