
ಪ್ರಜಾವಾಣಿ ವಾರ್ತೆ
ಮಡಿಕೇರಿ: ಲೋಕಸಭಾ ಚುನಾವಣೆಯ ಟಿಕೆಟ್ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಬಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕೊಡಗಿನ ಗಡಿ ಕುಶಾಲನಗರದಲ್ಲಿ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಕೊಪ್ಪ ಸೇತುವೆ ಬಳಿ ಇರುವ ಕಾವೇರಿ ಪ್ರತಿಮೆಗೆ ಯದುವೀರ್ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಸಲಹೆ ಸ್ವೀಕರಿಸಿ, ಟೀಕೆಗಳನ್ನು ಎದುರಿಸಿ ಕ್ಷೇತ್ರದ ಅಭಿವೃದ್ಧಿಗೆ ಪಣತೊಡುವುದಾಗಿ ಹೇಳಿದರು.
ಮಡಿಕೇರಿಯಲ್ಲಿ ನಡೆಯುತ್ತಿರುವ ಬಿಜೆಪಿಯ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಅವರು ಭಾಗಿಯಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.