ADVERTISEMENT

ಯವಕಪಾಡಿಯ ಶಾಲಾ ವಾರ್ಷಿಕೋತ್ಸವ, ಕ್ರೀಡೋತ್ಸವ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 3:21 IST
Last Updated 19 ಫೆಬ್ರುವರಿ 2026, 3:21 IST
ನಾಪೋಕ್ಲು ಸಮೀಪದ ಯವಕಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ಕ್ರೀಡೋತ್ಸವದಲ್ಲಿ ಶಾಲೆಯ ಮುಖ್ಯ ಅಡುಗೆಯವರಾದ ಕಾತ್ಯಾಯಿನಿ ಅವರನ್ನು ಸನ್ಮಾನಿಸಲಾಯಿತು
ನಾಪೋಕ್ಲು ಸಮೀಪದ ಯವಕಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ಕ್ರೀಡೋತ್ಸವದಲ್ಲಿ ಶಾಲೆಯ ಮುಖ್ಯ ಅಡುಗೆಯವರಾದ ಕಾತ್ಯಾಯಿನಿ ಅವರನ್ನು ಸನ್ಮಾನಿಸಲಾಯಿತು   

ನಾಪೋಕ್ಲು: ಮಕ್ಕಳಿಗೆ ಉತ್ತಮ ಜೀವನ ಮೌಲ್ಯಗಳನ್ನು ಕಲಿಸಿಕೊಡಬೇಕು ಎಂದು ನಿವೃತ್ತ ಶಿಕ್ಷಕಿ ರೇಖಾಕುಮಾರಿ ಹೇಳಿದರು.

ಸಮೀಪದ ಯವಕಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ಕ್ರೀಡೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಸಮಾರಂಭವನ್ನು ಕ್ರೀಡಾಜ್ಯೋತಿ ಬೆಳಗುವುದರ ಮೂಲಕ ಪ್ರಾರಂಭಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಆಟೋಟ, ಪೋಷಕರು, ಗ್ರಾಮಸ್ಥರಿಗೆ ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ವಿವಿಧ ರೀತಿಯ ಮನರಂಜನೆಯ ಆಟಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು

ADVERTISEMENT

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಅಡುಗೆಯವರಾದ ಕಾತ್ಯಾಯಿನಿ ಅವರನ್ನು ಸನ್ಮಾನಿಸಲಾಯಿತು. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಭರತ್ ಚಂದ್ರ ದೇವಯ್ಯ, ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ತಮ್ಮಯ್ಯ, ಉಪಾಧ್ಯಕ್ಷೆ ಮೀನಾ, ಯವಕಪಾಡಿ ಅಂಗನವಾಡಿ ಕಾರ್ಯಕರ್ತೆ ಪೊನ್ನು, ನಿವೃತ್ತ ಅಂಗನವಾಡಿ ಸಹಾಯಕಿ ಶಾಂತಿ ಕೆ.ಕೆ., ಹಿರಿಯ ಜಾನಪದ ಕಲಾವಿದೆ ಕುಡಿಯರ ದೇವಕ್ಕಿ, ಧನು, ಸುಬ್ರಮಣಿ, ಕಾರ್ಯಪ್ಪ, ಸುಂದರ, ದೇವಯ್ಯ ಇದ್ದರು.

ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮುಖ್ಯಶಿಕ್ಷಕಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಮುತ್ತಮ್ಮ ವರದಿ ವಾಚಿಸಿದರು. ಶಿಕ್ಷಕಿ ಅಶ್ವಿನಿ ಸ್ವಾಗತಿಸಿ, ವಂದಿಸಿದರು.

ನಾಪೋಕ್ಲು ಸಮೀಪದ ಯವಕಪಾಡಿ ‌ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ಕ್ರೀಡೋತ್ಸವ ಸಮಾರಂಭವನ್ನು ಅತಿಥಿಗಳು ಉದ್ಘಾಟಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.