ಸೋಮವಾರಪೇಟೆ: ಮಂಡಲ ಬಿಜೆಪಿ ವತಿಯಿಂದ ಕೊಡವ ಸಮಾಜದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.
ಯೋಗಶಿಕ್ಷಕರಾದ ದೊಡ್ಡಮಳ್ತೆ ಗ್ರಾಮದ ಪ್ರದೀಪ್ ಅವರು ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ತಾಲ್ಲೂಕು ಅಧ್ಯಕ್ಷ ಮೋಹಿತ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರುಪಾಕ್ಷ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಮಲ್ಲಜ್ಜಿರ ಪ್ರವೀಣ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಯೋಗ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.