
ಗೋಣಿಕೊಪ್ಪಲು: ‘ದೇಶದ ಏಕತೆಗೆ ಯುವಜನರು ಶ್ರಮಿಸಬೇಕು. ದೇಶಭಕ್ತಿ ಮತ್ತು ಏಕತೆಗೆ ಸರ್ದಾರ್ ವಲ್ಲಭಭಾಯ್ ಪಟೇಲ್ ಮಾದರಿ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಇಲ್ಲಿನ ಬಸ್ ನಿಲ್ದಾಣದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಏಕತಾ ಯಾತ್ರೆಯಲ್ಲಿ ಮಾತನಾಡಿದರು.
‘ಪಟೇಲ್ ಅವರ ತತ್ವ, ಚಿಂತನೆಗಳನ್ನು ಮೈಗೂಡಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ಯುವಕರು ತೊಡಗಬೇಕು’ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತ್ರಿವರ್ಣ ಧ್ವಜ ಹಿಡಿದು ಪೊನ್ನಂಪೇಟೆಯಿಂದ ಗೋಣಿಕೊಪ್ಪಲುವರೆಗೆ ಮೆರವಣಿಗೆ ನಡೆಸಿದರು.
ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್ ಇದ್ದರು.
ಬಳಿಕ ಗೋಣಿಕೊಪ್ಪಲಿನ ಪರಿಮಳ ಮಂಗಳ ವಿಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟೇಲ್ ಅವರ ಭಾವಚಿತ್ರಕ್ಕೆ ಸಂಸದ ಯದುವೀರ್, ಮಾಜಿ ಶಾಸಕ ಅಪ್ಪಚ್ಚು ರಂಜನ್ ಪುಷ್ಪಾರ್ಚನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.