ADVERTISEMENT

ಕೊಡಗಿನಲ್ಲಿ ಶೂನ್ಯಕ್ಕೆ ಇಳಿದ ಕೋವಿಡ್ ಸಾವು; ತುಸು ನೆಮ್ಮದಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 13:21 IST
Last Updated 9 ಜೂನ್ 2021, 13:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕಳೆದ ಎರಡು ತಿಂಗಳಿಂದ ಕೋವಿಡ್ ಸಾವಿನ ಸುದ್ದಿ ಕೇಳಿ ಆತಂಕಗೊಂಡಿದ್ದ, ಕಾಫಿ ನಾಡಿನ ಜನರಿಗೆ ಬುಧವಾರ ಜಿಲ್ಲಾಡಳಿತವು ಬಿಡುಗಡೆ ಮಾಡಿದ್ದ ಕೋವಿಡ್‌ ಅಂಕಿ–ಅಂಶದ ವರದಿಯು ತುಸು ನೆಮ್ಮದಿ ತಂದಿತು.

ಕಳೆದ 24 ಗಂಟೆಯಲ್ಲಿ ಕೋವಿಡ್‌ನಿಂದ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಆದರೆ, ಪ್ರಕರಣಗಳು ಇಳಿಕೆ ಕಂಡಿಲ್ಲ. ಬುಧವಾರ 196 ಹೊಸ ಕೋವಿಡ್– 19 ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿ ತಾಲ್ಲೂಕಿನಲ್ಲಿ 46, ಸೋಮವಾರಪೇಟೆ ತಾಲ್ಲೂಕಿನಲ್ಲಿ 113 ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ 37 ಹೊಸ ಕೋವಿಡ್– 19 ಪ್ರಕರಣಗಳು ಕಂಡುಬಂದಿವೆ.

ADVERTISEMENT

ಜಿಲ್ಲೆಯಲ್ಲಿನ ಒಟ್ಟು ಕೋವಿಡ್–19 ಪ್ರಕರಣಗಳ ಸಂಖ್ಯೆ 26,521 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 260 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 23,201 ಮಂದಿ ಗುಣಮುಖರಾಗಿದ್ದಾರೆ. 1,979 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ ಇದುವರೆಗೆ 341 ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 266 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ 8.5ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.