ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಸಹಾಯಕಿಯರ ಹುದ್ದೆ ಭರ್ತಿ ಸೇರಿ ಸಮಸ್ಯೆ ಪರಿಹಾರ

​ಪ್ರಜಾವಾಣಿ ವಾರ್ತೆ
Published 19 ಜೂನ್ 2018, 14:03 IST
Last Updated 19 ಜೂನ್ 2018, 14:03 IST
ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು ಪ್ರತಿಭಟಿಸಿದರು.
ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು ಪ್ರತಿಭಟಿಸಿದರು.   

ಮಾಲೂರು: ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದದ ತಾಲ್ಲೂಕು ಘಟಕದ ಕಾರ್ಯಕರ್ತರು ಪಟ್ಟಣದ ಶಿಶು ಅಭಿವೃದ್ಧಿ ಇಲಾಖೆಯ ಕಚೇರಿಯ ಮುಂಭಾಗ ಸೋಮವಾರ ಪ್ರತಿಭಟಿಸಿದರು.

ಸಂಘದ ಗೌರವಾಧ್ಯಕ್ಷೆ ಬಿ.ಎಸ್.ನಾಗರತ್ನ ಮಾತನಾಡಿ, ‘ತಾಲ್ಲೂಕಿನಲ್ಲಿ 300 ಅಂಗನವಾಡಿ ಕೇಂದ್ರಗಳಿವೆ. 60 ಸಹಾಯಕಿರ ಹುದ್ದೆಗಳುಮ ಇವೆ. 2 ವರ್ಷಗಳಿಂದ 20ರಿಂದ 25 ಹುದ್ದೆಗಳು ಖಾಲಿ ಇರುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸಮರ್ಪಕ ಕಾರ್ಯ ನಿರ್ವಹಣೆಗೆ ತೊಂದರೆಯಾಗಿದೆ. ಈಗಾಗಲೇ ಆಯ್ಕೆ ಪ್ರಕ್ರಿಯೆಗಳು ನಡೆದು ತಾತ್ಕಾಲಿಕ ಪಟ್ಟಿ ತಯಾರಿಸಿ 1 ವರ್ಷ ಕಳೆದಿದೆ. ಆದರೆ ಇದುವರೆವಿಗೂ ಜಲ್ಲಾಡಳಿತ ಆದೇಶ ನೀಡಿಲ್ಲ’ ಎಂದು ಆರೋಪಿಸಿದರು.

ತಾಲ್ಲೂಕಿನಲ್ಲಿ ಮಾತೃಪೂರ್ಣ ಯೋಜನೆ ಕಳೆದ 2017 ಅಕ್ಟೋಬರ್‌ನಲ್ಲಿ ಆರಂಭಗೊಂಡಿದೆ. ಆದರೆ ಇದುವರೆವಿಗೂ ಯೋಜನೆಗೆ ಅಗತ್ಯವಿರುವ ಪಾತ್ರೆ ಮತ್ತು ಪರಿಕರಗಳನ್ನು ವಿತರಿಸಿಲ್ಲ. ಕೇಂದ್ರಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಸರಬರಾಜು, ಶಿಥಿಲ ಕಟ್ಟಡಗಳ ದುರಸ್ಥಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಲ್ಲೂಕು ಘಟಕದ ಅಧ್ಯಕ್ಷೆ ಎಂ.ಲಕ್ಷ್ಮಮ್ಮ, ಕಾರ್ಯದರ್ಶಿ ಶ್ರೀವಳ್ಳಿ, ಖಜಾಂಚಿ ಪಿ.ಸಿ.ಜಯಮ್ಮ, ಸದಸ್ಯರಾದ ವಿಮಲಾ, ಸುಜಾತ, ಮಂಗಮ್ಮ, ಧರಣಿ, ಭಾಗ್ಯಮ್ಮ, ಲಕ್ಷ್ಮೀ , ನಾರಾಯಣಮ್ಮ, ಜಮುನಾ, ಕನಕಮ್ಮ ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.