ADVERTISEMENT

ಅಂಗವಿಕಲ ಮಕ್ಕಳಿಗೆ ಸವಲತ್ತು: ಸಲಹೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2013, 6:32 IST
Last Updated 4 ಡಿಸೆಂಬರ್ 2013, 6:32 IST

ಬಂಗಾರಪೇಟೆ: ಅಂಗವಿಕಲ ಮಕ್ಕಳಿಗೆ ಎಲ್ಲ ಮಕ್ಕಳೊಂದಿಗೆ ಶಾಲೆಯಲ್ಲಿ ಕಲಿಯುವ ಅವಕಾಶ ಕಲ್ಪಿಸಬೇಕು ಎಂದು ಸರ್ವ ಶಿಕ್ಷಣ ಅಭಿಯಾನ ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ ಸಿದ್ದಗಂಗಯ್ಯ ಹೇಳಿದರು.

ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ  ಮಾತನಾಡಿ, ಅಂಗವಿಕಲತೆ ಕಾರಣದಿಂದ ಮಗುವಿಗೆ ಶಾಲೆ ಪ್ರವೇಶ ನಿರಾಕರಿಸುವುದು ಕಾನೂನು ಬಾಹಿರ. ಪ್ರವೇಶ ನಿರಾ ಕರಿಸುವ ಶಾಲೆಗಳ ವಿರುದ್ಧ ಇಲಾಖೆ ಕ್ರಮಕೈಗೊಳ್ಳತ್ತದೆ. ಅಂಗವಿಕಲರಿಗೆ ಇಲಾಖೆಯಿಂದ ದೊರೆಯುವ ಎಲ್ಲ ಸವಲತ್ತು ಮಕ್ಕಳಿಗೆ ತಲುಪಿಸಬೇಕು ಎಂದರು.

ಕ್ಷೇತ್ರ ಸಮನ್ವಯ ಅಧಿಕಾರಿ ಜಿ.ಬಿ. ಯುವರಾಜ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಅಂಗವಿಕಲ ಮಕ್ಕಳ   ಅನುಕೂಲಕ್ಕಾಗಿ ಇಳಿಜಾರು ಸೌಲಭ್ಯ, ವಿಶೇಷ ಶೌಚಾಲಯ, ವೈದ್ಯಕೀಯ ಶಿಬಿರ, ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದರು. 

ಅಂಗವಿಕಲ ಮಕ್ಕಳ ಕ್ರೀಡಾಕೂಟ ದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಆರ್.ಶ್ರೀನಿವಾಸನ್ ಮಾತನಾಡಿದರು. ಸಹಾಯಕ ಯೋಜನಾಧಿಕಾರಿ ಭಾಗ್ಯಲಕ್ಷ್ಮೀ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರಗೌಡ,  ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ, ತಾಲ್ಲೂಕು ಪ್ರಭಾರ ದೈಹಿಕ ಶಿಕ್ಷಣ ಶಿಕ್ಷಕ ಮದಿಅಳಗನ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಸ್.ರಮಣಪ್ಪ, ಖಾದರ್‌ಬಾಷ, ಟಿ.ಮುನಿರಾಜು ಇದ್ದರು. ವೆಂಕಟೇಶಗೌಡ ಸ್ವಾಗತಿಸಿ, ಬಂಗವಾದಿ ನಾರಾಯಣಪ್ಪ ವಂದಿಸಿದರು.

‘ಅಂಗವಿಕಲರಿಗೆ ಸೌಲಭ್ಯ’
ಮುಳಬಾಗಲು:
ಅಂಗವಿಕಲ ಮಕ್ಕಳಿಗೆ ಸರ್ವ ಶಿಕ್ಷಣ ಅಭಿಯಾನದಲ್ಲಿ ಹಲವು ಪ್ರಯೋಜನ ದೊರೆಯುತ್ತದೆ ಎಂದು  ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ದೇವರಾಜ್ ಹೇಳಿದರು.

ಪಟ್ಟಣದ ಡಾ.ಅಂಬೇಡ್ಕರ್‌ ನಗರದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಫಾಟಿಸಿ ಮಾತನಾಡಿ, ಅಂಗವಿಕಲ ರಿಗೆ ಅನುಕಂಪಕ್ಕಿಂತ ಅವಕಾಶ ನೀಡಿ ಎಂದು ಅವರು ಹೇಳಿದರು.

ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಭಾಗವಹಿಸಿದ್ದ ಎಲ್ಲ ಮಕ್ಕಳಿಗೂ ಸಮಾಧಾನಕರ ಪತ್ರ ವಿತರಿಸಲಾಯಿತು.

ಮುಖ್ಯಶಿಕ್ಷಕ ಎನ್.ವೆಂಕಟರವಣಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರದ ಅಧಿಕಾರಿ ಗಂಗಪ್ಪ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶಿವಣ್ಣ, ಶಿಕ್ಷಕ ನಾರಾಯಣಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಗಣೇಶ್, ಸುರೇಶ್, ಮುನಿರಾಜು, ಕುಶ, ಸುಬ್ರಮಣ್ಯರೆಡ್ಡಿ. ಪ್ರಕಾಶ್ ಭಾಗವಹಿದ್ದರು. ಶಿವ ಕುಮಾರ್‌ ಸ್ವಾಗತಿಸಿದರು. ಕೆ.ಚಂದ್ರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.