ADVERTISEMENT

ಕಾಯಂ ಶಿಕ್ಷಕರನ್ನು ನೇಮಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2012, 10:10 IST
Last Updated 15 ಏಪ್ರಿಲ್ 2012, 10:10 IST

ಕೋಲಾರ: ತಾಲ್ಲೂಕಿನ ವಕ್ಕಲೇರಿ ಹೋಬಳಿಯ ವಡಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಈಚೆಗೆ ಧರಣಿ ನಡೆಸಿದರು. 

 ಶಾಲೆಯ ಸಹಶಿಕ್ಷಕಿ ವಿ.ಎಸ್.ವೀಣಾ ಎಂಬುವರು 2003ರಲ್ಲಿ ಕರ್ತವ್ಯಕ್ಕೆ ಹಾಜರಾದ ಬಳಿಕ ಇಲ್ಲಿಯವರೆಗೂ ಕೋಲಾರದ ಹಾರೋಹಳ್ಳಿಯ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ವಡಗೆರೆ ಶಾಲೆಯ ಮಕ್ಕಳಿಗೆ ಅದರಿಂದ ಅನಾನುಕೂಲವಾಗುತ್ತಿದೆ. ಕೂಡಲೇ ಶಿಕ್ಷಣ ಇಲಾಖೆ ಕಾಯಂ ಶಿಕ್ಷಕರನ್ನು ನೇಮಿಸಬೇಕು ಎಂದುಆಗ್ರಹಿಸಿದರು. ಮುಖಂಡರಾದ ಕೆಂಪಣ್ಣ, ಶಾಮಣ್ಣ, ಕೆ.ವಿ.ವೆಂಕಟೇಶ್ ನೇತೃತ್ವ ವಹಿಸಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.