ADVERTISEMENT

`ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳಿ'

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2012, 10:47 IST
Last Updated 15 ಡಿಸೆಂಬರ್ 2012, 10:47 IST

ಕೋಲಾರ: ರೈತರು ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಲಾಭ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶಗೌಡ ರೈತರಿಗೆ ಸಲಹೆ ನೀಡಿದರು.

ತಾಲ್ಲೂಕಿನ ಹೊಳಲಿ ಗ್ರಾಮದಲ್ಲಿ ರೈತರಿಗೆ ರಾಷ್ಟ್ರೀಯ ಕೃಷಿ ಯೋಜನೆಯಡಿ ಹಮ್ಮಿಕೊಂಡಿದ್ದ ಬೆಳೆ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.ರೈತ ದೇಶದ ಬೆನ್ನೆಲುಬು. ತನ್ನೆಲ್ಲ ಸ್ವಾರ್ಥ ಬಿಟ್ಟು ಯಾವುದೇ ಫಲಾಪೇಕ್ಷೆಯಿಲ್ಲದೆ ದೇಶದ ಜನರ ಹಸಿವು ನೀಗಿಸುವ ವ್ಯಕ್ತಿ ಎಂದರೆ ಅದು ರೈತ ಮಾತ್ರ. ಆಧುನಿಕತೆಯಲ್ಲಿ ರೈತರು ವೈಜ್ಞಾನಿಕ ಕ್ರಮ ಅಳವಡಿಸಿಕೊಂಡು ಕೃಷಿಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದರು.

ಬೆಂಗಳೂರಿನ ವೃತ್ತಿ ಜೀವನೋಪಾಯ ಸಂಪನ್ಮೂಲ ಸಂಸ್ಥೆ ಪ್ರಾದೇಶಿಕ ವ್ಯವಸ್ಥಾಪಕ ಭಾಸ್ಕರ್, ಶೈಲಜಾ, ಕೋಟಿಗಾನಹಳ್ಳಿ ವೆಂಕಟೇಶ್ವರ ನರ್ಸರಿ ಮಾಲೀಕ ಗಣೇಶಗೌಡ, ಬೆಳಗಾನಹಳ್ಳಿ ಚಲಪತಿ, ಮಂಜುನಾಥ್, ಕೃಷ್ಣಪ್ಪ, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ಇದೇ ಸಂದರ್ಭ ಉತ್ತಮ ಬೆಳೆ ಬೆಳೆದ ಹೊಳಲಿಯ ಪ್ರಗತಿಪರ ರೈತ ಗೋವಿಂದಪ್ಪ ಅವರನ್ನು ಸನ್ಮಾನಿಸಲಾಯಿತು.ಆಂಧ್ರಪ್ರದೇಶದ ಮೇದಕ್ ಜಿಲ್ಲೆಯ 40 ರೈತರು ಬೆಳೆ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡು ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.