ADVERTISEMENT

ಗಡಿ ಪ್ರದೇಶ: ಭಾಷಾ ಸಾಮರಸ್ಯ ಕೇಂದ್ರ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2017, 11:05 IST
Last Updated 2 ನವೆಂಬರ್ 2017, 11:05 IST
ಚಮಕಲಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು
ಚಮಕಲಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು   

ನಂಗಲಿ: ‘ಭಾಷೆಗಳು ಬೇರೆ ಬೇರೆ ಬೇರೆಯಾದರೂ ಭಾವನೆಗಳು ಒಂದೇ. ಭಾಷಾ ಸಾಮರಸ್ಯ ಮತ್ತು ಸಮ್ಮಿಲನದ ಕೇಂದ್ರ ಈ ಗಡಿ ಪ್ರದೇಶ’ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಎನ್. ಚಂದ್ರು ಹೇಳಿದರು.

ಇಲ್ಲಿನ ಚಮಕಲಹಳ್ಳಿ ಬಳಿಯ ಘಟ್ಟುವಿನ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭಾಷಾ ಸಾಮರಸ್ಯದಿಂದ ಕನ್ನಡ ಭಾಷೆಗೆ ಕುತ್ತಿಲ್ಲ. ಇಲ್ಲಿರುವ ವಿದ್ಯಾರ್ಥಿಗಳಿಗೆ ತೆಲುಗು ಬರುತ್ತದೆ. ಆದರೆ ಕನ್ನಡ ಭಾಷೆಯ ಮೇಲಿನ ಪ್ರೀತಿಗೆ ಕೊರತೆ ಇಲ್ಲ’ ಎಂದು ತಿಳಿಸಿದರು.

ADVERTISEMENT

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉತ್ತಮವಾಗಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟ ವಿದ್ಯಾರ್ಥಿಗಳಿಗೆ ಶಿಕ್ಷಕರು ಬಹುಮಾನಗಳನ್ನು ನೀಡಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಎಸ್. ವರದಪ್ಪ, ಆನಂದ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಲಿಂಗಪ್ಪ, ಸುಬ್ರಹ್ಮಣ್ಯಂ, ರವಿಚಂದ್ರ, ಚಂದ್ರ ಶೇಖರ್, ಚಂದ್ರಪ್ಪ, ಅಂಬರೀಷ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.