ADVERTISEMENT

ಗುಣಮಟ್ಟದ ಹಾಲು ಉತ್ಪಾದನೆ:ಸಲಹೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2011, 10:15 IST
Last Updated 4 ಅಕ್ಟೋಬರ್ 2011, 10:15 IST

ಶ್ರೀನಿವಾಸಪುರ:  ಹಾಲು ಒಕ್ಕೂಟದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲನ್ನು ಉತ್ಪಾದಿ ಸುವುದರ ಮೂಕ ತಮ್ಮ ಆರ್ಥಿಕ ಮಟ್ಟ ಉತ್ತಮ ಪಡಿಸಿಕೊಳ್ಳಬೇಕು ಎಂದು ಕೋಲಾರ ಹಾಲು ಒಕ್ಕೂಟದ ನಿರ್ದೇಶಕ ಸಿ.ಮುನಿವೆಂಕಟಪ್ಪ ಸಲಹೆ ಮಾಡಿದರು.

ತಾಲ್ಲೂಕಿನ ಚೌಡದೇನಹಳ್ಳಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಕೆಲವು ಹಾಲು ಉತ್ಪಾದಕರು ತಾವು ಉತ್ಪಾದಿಸಿದ ಹಾಲನ್ನು ಅನ್ಯ ರಾಜ್ಯಗಳ ಖಾಸಗಿ ಡೈರಿಗಳಿಗೆ ಮಾರಾಟ ಮಾಡುತ್ತಿರುವುದು ದುರದೃಷ್ಟಕರ. ಅವುಗಳ ಪ್ರಯೋಜನ ಸಿಗಬೇಕಾದರೆ ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲನ್ನು ಹಾಕಬೇಕು ಎಂದು ಹೇಳಿದರು.   ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಡಾ. ರಮೇಶ್ ಮಾತನಾಡಿ, ಹೈನುಗಾರಿಕೆಯಲ್ಲಿ ವೈಜ್ಞಾನಿಕ ವಿಧಾನಗಳನ್ನು ಅನುಸರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲು ಪೂರೈಸುತ್ತಿರುವ ಹಾಲು ಉತ್ಪಾದಕರಿಗೆ ಪ್ರೋತ್ಸಾಹವಾಗಿ ಸ್ಟೀಲ್ ಬಿಂದಿಗೆ ವಿತರಿಸಲಾಯಿತು.

 ಡಾ. ಪ್ರಸಾದ್, ಕುಮಾರ್, ಚೌಧರಿ, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಸಿ.ಎಂ.ವೆಂಕಟೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.