ADVERTISEMENT

`ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ'

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2012, 9:09 IST
Last Updated 20 ಡಿಸೆಂಬರ್ 2012, 9:09 IST

ಮುಳಬಾಗಲು: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಉತ್ತಮ ಸಾಧನೆ ಪ್ರದರ್ಶಿಸಲಿ ಎಂದು ಶಾಸಕ ಅಮರೇಶ್ ಸಲಹೆ ನೀಡಿದರು.ಪಟ್ಟಣದ ಬಳೇ ಚಂಗಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸುವಂತೆ ಸೂಚಿಸಿದರು.ತಾಲ್ಲೂಕಿನ ಎಲ್ಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ.ಜಗನ್ನಾಥ್, ಕಾರ್ಯದರ್ಶಿ ಎಂ.ಶಿವಣ್ಣ, ಖಜಾಂಚಿ ಜೆ.ಎಸ್.ಮಂಜುನಾಥ್, ಶಿಕ್ಷಣ ಸಂಯೋಜಕ ರಂಗಸ್ವಾಮಿ, ಮುಖ್ಯ ಶಿಕ್ಷಕ ಜಿ.ವೆಂಕಟರಾಮ್, ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಸ್.ಜಯರಾಮ್ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.