ADVERTISEMENT

ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ

​ಪ್ರಜಾವಾಣಿ ವಾರ್ತೆ
Published 6 ಜೂನ್ 2011, 8:35 IST
Last Updated 6 ಜೂನ್ 2011, 8:35 IST
ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ
ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ   

ಮಾಲೂರು: `ಮುಂದಿನ ಪೀಳಿಗೆಗಾಗಿ ಪರಿಸರ ಉಳಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ~ ಎಂದು ಪುರಸಭಾ ಉಪಾಧ್ಯಕ್ಷ ಎ.ರಾಜಪ್ಪ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆ ಅಂಗ ವಾಗಿ ಭಾನುವಾರ  ಪಟ್ಟಣದ ಬಾ ಲಾಜಿ ವೃತ್ತದಲ್ಲಿ ಪುರಸಭೆ ವತಿಯಿಂದ  ಏರ್ಪಡಿಸಿದ್ದ ಗಿಡನೆಡುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದರು.

`ಮನುಷ್ಯನ ಸ್ವಾರ್ಥ ಭೂ ತಾಪ ಮಾನಕ್ಕೆ ಕಾರಣವಾಗಿದೆ. ಇದರಿಂದ  ಅಂತರ್ಜಲ ಮಟ್ಟ ಕುಸಿದಿದೆ. ಪ್ರತಿ ಯೊಬ್ಬರು ಗಿಡ ನೆಟ್ಟು ಪರಿಸರ ಸಂರ ಕ್ಷಣೆಗೆ ಸಹಕರಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಪುರಸಭೆ ವತಿಯಿಂದ ಪ್ರತಿ ಯೊಂದು ಮನೆಗೆ ಉಚಿತ ಗಿಡ ನೀಡು ವುದಾಗಿ ತಿಳಿಸಿದರು.

ಪುರಸಭಾ ಅಧ್ಯಕ್ಷೆ ಗುಲಾಬ್ ಜಾನ್, ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ಆಂಜಿನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ, ಮುಖ್ಯ ಅಧಿಕಾರಿ ರುದ್ರಮುನಿ, ಸದಸ್ಯರಾದ ಪ್ರದೀಪ್ ರೆಡ್ಡಿ, ಮಾರ್ಕೆಟ್ ವೆಂಕ ಟೇಶ್, ಎಂ.ಆರ್.ದೇವರಾಜ್ ರೆಡ್ಡಿ, ಬಾಬು, ತಾಲ್ಲೂಕು ಕಸಾಪ ಅಧ್ಯಕ್ಷ ಎ. ಅಶ್ವಥ್ ರೆಡ್ಡಿ, ಮುಖಂಡರಾದ ಮಧೂಸೂ ದನ್, ಎಸ್.ವಿ. ಶ್ರೀಹರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.