ADVERTISEMENT

ಪಾರದರ್ಶಕ ಕಾರ್ಯನಿರ್ವಹಣೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2013, 6:18 IST
Last Updated 5 ಜುಲೈ 2013, 6:18 IST

ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ವಸತಿ ರಹಿತರನ್ನು ಗುರುತಿಸಿ ಪಕ್ಷಾತೀತವಾಗಿ ಮನೆಗಳನ್ನು ವಿತರಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಸಲಹೆ ಮಾಡಿದರು.

ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ ಮಾತನಾಡಿ, ಕುಡಿಯುವ ನೀರು ಪೂರೈಕೆಗೆ ಅನುದಾನದ ಕೊರತೆ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಗುರುತಿಸಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಬೇಕು ಎಂದು ಹೇಳಿದರು.

ಸರ್ಕಾರ ಬಡವರಿಗೆ ಕೆಜಿಯೊಂದಕ್ಕೆ ರೂ.1 ರ ದರದಲ್ಲಿ ಅಕ್ಕಿ ವಿತರಿಸಲು ತೀರ್ಮಾನಿಸಿದೆ. ಸಾರ್ವಜನಿಕರು ಅದರ ದುರುಪಯೋಗ ಮಾಡಿಕೊಳ್ಳಬಾರದು. ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರೆಯಲು ಸಹಕರಿಸಬೇಕು. ಸುಳ್ಳು ದಾಖಲೆಗಳನ್ನು ನೀಡಿ ಪಡಿತರ ಚೀಟಿ ಪಡೆದು ವಂಚಿಸುವುದು ಅಪರಾಧವಾಗುತ್ತದೆ ಎಂದು ಎಚ್ಚರಿಸಿದರು.

ಲಕ್ಷ್ಮೀಪುರದ ವೀರಾಂಜನೇಯ ಸೇವಾ ಟ್ರಸ್ಟ್ ಅಧ್ಯಕ್ಷ ವಿ.ವೆಂಕಟೇಶ್ ಸಮುದಾಯ ಭವನ ಬೇಕೆಂದು ಮನವಿ ಸಲ್ಲಿಸಿದರು. ಅದಕ್ಕೆ ಸ್ಪಂದಿಸಿದ ಶಾಸಕರು ಸಮುದಾಯ ಭವನ ಮಂಜೂರು ಮಾಡಿಸುವ ಭರವಸೆ ನೀಡಿದರು.

ಗ್ರಾ.ಪಂ.ಸದಸ್ಯರಾದ ಎನ್.ವೆಂಕಟೇಶ್, ನಾರಾಯಣಸ್ವಾಮಿ, ಮುಖಂಡರಾದ ಟಿ.ವಿ.ನಾರಾಯಣಸ್ವಾಮಿ, ಮ್ಯೋಕಲ ನಾರಾಯಣಸ್ವಾಮಿ, ಗೋವಿಂದಸ್ವಾಮಿ, ಕೊಂಡಪ್ಪ, ಜಮೀಲ್ ಪಾಷ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.