ADVERTISEMENT

ಪೊಲೀಸರು ಜನತೆ ವಿಶ್ವಾಸ ಗಳಿಸಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2011, 5:45 IST
Last Updated 12 ಫೆಬ್ರುವರಿ 2011, 5:45 IST

ಶ್ರೀನಿವಾಸಪುರ: ಗ್ರಾಮೀಣ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನಪಡೆದು ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಸಿ.ಬೈರೇಗೌಡ ತಾಂತ್ರಿಕ ಮಹಾವಿದ್ಯಾಲಯ ಕಾರ್ಯದರ್ಶಿ ವಿ.ಕೃಷ್ಣಾರೆಡ್ಡಿ ಸಲಹೆ ಮಾಡಿದರು.  ತಾಲ್ಲೂಕಿನ ಸಿ.ಹೊಸೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಕಂಪ್ಯೂಟರ್ ವಿಭಾಗ ಉದ್ಘಾಟಿಸಿ ಮಾತನಾಡಿದ ಅವರು, ನಗರ ಹಾಗೂ ಪಟ್ಟಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಕಂಪ್ಯೂಟರ್ ಶಿಕ್ಷಣ ಪಡೆಯುವಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಿಂದೆ ಇದ್ದಾರೆ. ಈ ಪರಿಸ್ಥಿತಿ ಬದಲಾಗಬೇಕು. ಈ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣವನ್ನು ವ್ಯವಸ್ಥಿತವಾಗಿ ನೀಡುವಂತಾಗಬೇಕು ಎಂದು ಹೇಳಿದರು.

  ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಮಹ್ಮದ್‌ಖಲೀಲ್ ಮಾತನಾಡಿ, ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಸೌಲಭ್ಯ ಕೊಡುತ್ತಿದೆ. ವಿ.ಕೃಷ್ಟಾರೆಡ್ಡಿ ತಮ್ಮ ಗ್ರಾಮದ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿದ್ದಾರೆ. ಹಾಗೆಯೇ ಶಿಕ್ಷಕರು ದಾನಿಗಳ ನೆರವು ಪಡೆದು ಶಾಲೆಗಳನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕು. ಗುಣಾತ್ಮಕ ಕಲಿಕೆಗೆ ಗಮನ ನೀಡಬೇಕು ಎಂದು ಹೇಳಿದರು.

  ಎಸ್‌ಡಿಎಂಸಿ ಅಧ್ಯಕ್ಷ ಎಂ.ವಿ.ಅಶ್ವತ್ಥನಾರಾಯಣ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಸಿ.ನಾಗರಾಜ್, ತಾಲ್ಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಅಬ್ದುಲ್‌ರಜಾಕ್, ಪಿಇಒ ಮುನಿರೆಡ್ಡಿ, ಸಿಆರ್‌ಪಿ ನಾಗರತ್ನಮ್ಮ, ಮುಖ್ಯ ಶಿಕ್ಷಕ ಎಸ್.ಎನ್.ಪುರುಷೋತ್ತಮ್, ಶಿಕ್ಷಕ ನಾರಾಯಣಸ್ವಾಮಿ, ಗ್ರಾ.ಪಂ. ಅಧ್ಯಕ್ಷೆ ವೆಂಕಟಮ್ಮ, ಉಪಾಧ್ಯಕ್ಷ ಆರ್.ಲಕ್ಷ್ಮಯ್ಯ, ಮುಖಂಡರಾದ ರವಿಕುಮಾರ್, ಎಚ್.ಸಿ.ನಾಗರಾಜರೆಡ್ಡಿ, ಸತ್ಯನಾರಾಯಣರೆಡ್ಡಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಎನ್.ಆರ್.ರಮೇಶ್ ಸ್ವಾಗತಿಸಿದರು. ಡಿ.ಎ.ತಾಜ್‌ಪಾಷಾ ವಂದಿಸಿದರು..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.