ADVERTISEMENT

ಪ್ರಜಾಪ್ರಭುತ್ವದ ಉಳಿವಿಗೆ ಮತದಾನ ಮಾಡಿ

ಮತದಾನ ಜಾಗೃತಿ ಜಾಥಾ ಉದ್ಘಾಟಿಸಿದ ಪ್ರಾಂಶುಪಾಲ ಪಿ.ಸೀನಪ್ಪ ಸಲಹೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2018, 9:55 IST
Last Updated 6 ಏಪ್ರಿಲ್ 2018, 9:55 IST
ಶ್ರೀನಿವಾಸಪುರದಲ್ಲಿ ಗುರುವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎಸ್‌ವಿ ಪ್ಯಾರಾ ಮೆಡಿಕಲ್‌ ಸೈನ್ಸ್‌ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಶ್ರೀನಿವಾಸಪುರದಲ್ಲಿ ಗುರುವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎಸ್‌ವಿ ಪ್ಯಾರಾ ಮೆಡಿಕಲ್‌ ಸೈನ್ಸ್‌ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು   

ಶ್ರೀನಿವಾಸಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರವಾದುದು. ಮತದಾರರು ಪ್ರಾಮಾಣಿಕವಾಗಿ ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಬಲಪಡಿಸಬೇಕು ಎಂದು ಎಸ್‌ವಿ ಪ್ಯಾರಾ ಮೆಡಿಕಲ್‌ ಸೈನ್ಸ್‌ ಕಾಲೇಜಿನ ಪ್ರಾಂಶುಪಾಲ ಪಿ.ಸೀನಪ್ಪ ಹೇಳಿದರು. ಪಟ್ಟಣದ ಎಸ್‌ವಿ ಪ್ಯಾರಾ ಮೆಡಿಕಲ್‌ ಸೈನ್ಸ್‌ ಕಾಲೇಜು ಹಾಗೂ ಪುರಸಭೆಯಿಂದ ಗುರುವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.

ಮತದಾರರು ಮತ ಚಲಾವಣೆಗಾಗಿ ಯಾವುದೇ ಆಮಿಷಕ್ಕೆ ಒಳಗಾಗಬಾರದು. ಹಾಗೆ ಮಾಡಿದರೆ ಆತ್ಮ ವಂಚನೆಯಾಗುತ್ತದೆ. ಪ್ರಜಾಪ್ರಭುತ್ವದ ಬುಡಕ್ಕೆ ಕೊಡಲಿ ಹಾಕಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್‌ ಮಾತನಾಡಿ, ವಿದ್ಯಾವಂತ ಸಮುದಾಯ ಮತದಾನದ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಪ್ರಜಾಪ್ರಭುತ್ವದ ಉಳಿವಿಗೆ ಪೂರಕವಾದ ಅಂಶಗಳತ್ತ ಗಮನ ಸೆಳೆಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತ್ರ ವ್ಯಕ್ತಿ ಸ್ವಾತಂತ್ರ್ಯ ಇರುತ್ತದೆ. ಇದನ್ನು ಮತದಾರರು ಮನಗಾಣಬೇಕು. ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಮತದಾರರಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿದರು. ಬಸ್‌ ನಿಲ್ದಾಣದ ಸಮೀಪ ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.