ADVERTISEMENT

ಪ್ಲಾಸ್ಟಿಕ್ ಮುಕ್ತ ಪಟ್ಟಣಕ್ಕೆ ಸಹಕರಿಸಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2011, 8:20 IST
Last Updated 22 ಜೂನ್ 2011, 8:20 IST

ಶ್ರೀನಿವಾಸಪುರ: ಪ್ರತಿಯೊಬ್ಬರು ಪರಿಸರ ರಕ್ಷಣೆ ಮತ್ತು ಜಾನುವಾರು ಗಳ ಆರೋಗ್ಯದ ದೃಷ್ಟಿಯಿಂದ ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡಲು ಸಹಕರಿಸೋಣ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಎಂದರು.

ಪಟ್ಟಣದಲ್ಲಿ ಪುರಸಭೆಯ ವತಿಯಿಂದ ಶನಿವಾರ ಏರ್ಪಡಿಸಿದ್ದ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುವ ವಿದ್ಯಾರ್ಥಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ಲಾಸ್ಟಿಕ್ ಬಳಕೆ ಹಲವು ಸಮಸ್ಯೆಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ವಿದ್ಯಾವಂತ ಸಮುದಾಯ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಪುರಸಭಾಧ್ಯಕ್ಷ ಎಸ್.ಶ್ರೀನಿವಾಸಪ್ಪ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಡಾ.ಎಸ್.ರೂಪಶ್ರೀ, ಜಿ.ಪಂ. ಉಪಾಧ್ಯಕ್ಷ ಜಿ.ಸೋಮಶೇಖರ್, ಪುರಸಭೆ ಮುಖ್ಯಾಧಿಕಾರಿ ಕೆ. ಜಗದೀಶ್, ಸದಸ್ಯ ಬಿ. ಶ್ರೀನಿವಾಸರೆಡ್ಡಿ, ಸಹಾಯಕ  ಎಂಜಿನಿಯರ್ ಪದ್ಮನಾಭರೆಡ್ಡಿ, ಪ್ರಾಂಶುಪಾಲ ಕೆ.ಸಿ.ಕೃಷ್ಣಾರೆಡ್ಡಿ ಮತ್ತಿತರರು  ಉಪಸ್ಥಿತರಿದ್ದರು.

ಸ್ಥಾಯಿ ಸಮಿತಿಯ ಅಧ್ಯಕ್ಷ ಎನ್.ವೆಂಕಟೇಶ್ ಸ್ವಾಗತಿಸಿದರು. ಆರೋಗ್ಯ ನಿರೀಕ್ಷಕ ನವೀನ್ ಚಂದ್ರ ವಂದಿಸಿದರು. ಸಮಾರಂಭದ ನಂತರ ವಿದ್ಯಾರ್ಥಿಗಳು ಪಟ್ಟಣದಲ್ಲಿ ಜಾಥಾ ನಡೆಸಿ ನಾಗರಿಕರಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.