ADVERTISEMENT

ಭತ್ತದ ಬೀಜಕ್ಕೆ ಹೆಚ್ಚಿದ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2012, 10:20 IST
Last Updated 19 ಜುಲೈ 2012, 10:20 IST

ಮುಳಬಾಗಲು: ಎರಡು ದಿನಗಳಿಂದ ತಾಲ್ಲೂಕಿನಲ್ಲಿ ಸುರಿದ ಮಳೆ, ಕೃಷಿ ಚಟುವಟಿಕೆಗಳಿಗೆ ಜೀವಕಳೆ ತುಂಬಿದೆ.

ಕೆರೆಗಳಿಗೆ ನೀರು ಬಂದಿದ್ದು, ರೈತರು ಭತ್ತ ಬಿತ್ತನೆಗೆ ಅಣಿ ಮಾಡಿಕೊಳ್ಳುತ್ತಿದ್ದಾರೆ. ಬಿತ್ತನೆ ಭತ್ತಕ್ಕಾಗಿ ಕೃಷಿ ಇಲಾಖೆ ಕಚೇರಿ ಮುಂದೆ ಜಮಾಯಿಸಿದ್ದ ದೃಶ್ಯ ಬುಧವಾರ ಕಂಡು ಬಂತು. ಅಲ್ಪ ಅವಧಿಯ ಬಿಳಿ ಹಂಸ ಮತ್ತು ಒಂದು ಸಾವಿರ ಭತ್ತದ ಬೀಜಕ್ಕೆ ಬೇಡಿಕೆ ಹೆಚ್ಚಿದೆ.

ಕೃಷಿ ಇಲಾಖೆ 1453 ಕ್ವಿಂಟಲ್ ನೆಲಗಡಲೆ, 710 ಕ್ವಿಂಟಲ್ ಭತ್ತ, 36 ಕ್ವಿಂಟಲ್ ತೊಗರಿ ಬಿತ್ತನೆ ಬೀಜವನ್ನು ರೈತರಿಗೆ ಪೂರೈಸಿದೆ. ಇದರ ಜತೆ ಸಬ್ಸಿಡಿ ದರದಲ್ಲಿ ಕೃಷಿ ಉಪಕರಣಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳಿಗಳು `ಪ್ರಜಾವಾಣಿ~ಗೆ ತಿಳಿಸಿದರು.

ಬಿತ್ತನೆ ಬೀಜ ಪಡೆಯಲು ಕಂಪ್ಯೂಟರ್ ಕೇಂದ್ರದಲ್ಲಿ ಪಹಣಿಗೆ, ಗ್ರಾಮಲೆಕ್ಕಿಗರಿಂದ ನೀರಾವರಿ ಸೌಲಭ್ಯವಿರುವ ಬಗ್ಗೆ ಹಾಗೂ ಇತರೆ ದೃಢೀಕರಣ ಪಡೆಯಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಮಧ್ಯಾಹ್ನ ಮೂರು ಗಂಟೆವರೆವಿಗೂ ಬಿತ್ತನೆ ಬೀಜ ಬಂದಿರಲಿಲ್ಲ. ಆದರೆ ರೈತರು ವ್ಯವಸಾಯ ಇಲಾಖೆಯ ಅನುಮತಿ ಪಡೆದು ನಂತರ ಬೀಜ ನೀಡುವ ಉಗ್ರಾಣದ ಬಳಿ ಭತ್ತದ ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದರು. ಸಂಜೆ ನಾಲ್ಕು ಗಂಟೆ ವೇಳೆಗೆ ಈ ಸಂಖ್ಯೆ ಸಾವಿರ ದಾಟಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.