ADVERTISEMENT

ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2012, 6:10 IST
Last Updated 22 ಜೂನ್ 2012, 6:10 IST

ಮಾಲೂರು: ಮಹಿಳೆಯರನ್ನು ಎಲ್ಲ ಕ್ಷೇತ್ರದಲ್ಲಿ ಸಮಾಜದ ಮುಖ್ಯವಾಹಿನಿಗೆ ತರಲು ಮಹಿಳಾ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ತಿಳಿಸಿದರು.

ಪಟ್ಟಣದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರಂಗಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಶಿಶು ಅಭಿವೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್‌ಗಳನ್ನು ವಿತರಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ 380 ಮಂದಿ ಭಾಗ್ಯಲಕ್ಷ್ಮಿ ಫಲಾನುಭವಿಗಳ ಬಾಂಡ್ ಜೊತೆಗೆ ಸೀರೆ ಹಾಗೂ ಮಕ್ಕಳಿಗೆ ಬಟ್ಟೆ ವಿತರಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಗೋಪಾಲಗೌಡ, ಉಪಾಧ್ಯಕ್ಷೆ ಅಮರಾವತಿ, ಶಿಶು ಅಭಿವೃದ್ಧಿ ಅಧಿಕಾರಿ ವೆಂಕಟೇಶರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಯಶೋಧಮ್ಮ, ಪುರಸಭೆ ಅಧ್ಯಕ್ಷೆ ಅಮುದಾ, ಉಪಾಧ್ಯಕ್ಷ ಎ.ರಾಜಪ್ಪ, ಸದಸ್ಯರಾದ ಸಿ.ಪಿ.ನಾಗರಾಜ್, ಎಂ.ಕೆ.ಆಂಜಿನಪ್ಪ, ಎಂ.ಸಿ.ವೆಂಕಟೇಶ್, ಅನಿತಾ, ಕೃಷ್ಣಬಾಬು, ಎಂ.ಜಿ.ಮಧುಸೂಧನ್, ತಾ.ಪಂ. ಸದಸ್ಯರಾದ ಪುಟ್ಟಸ್ವಾಮಿ, ನಾಗವೇಣಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸಿ.ಎಂ.ನಾರಾಯಣಗೌಡ, ಕಾರ್ಯಾಧ್ಯಕ್ಷ ಎಂ.ವಿ.ವೇಮನ, ಕಾರ್ಯದರ್ಶಿ ಬಿ.ಆರ್.ವೆಂಕಟೇಶ್, ಮುಖಂಡರಾದ ಎ.ಅಶ್ವಥರೆಡ್ಡಿ, ಎ.ನಾಗರಾಜರೆಡ್ಡಿ, ವೆಂಕಟೇಶ್‌ಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.