ADVERTISEMENT

ಮನೆ ನೋಂದಣಿಗೆ ಹಣ ವಸೂಲಿ: ದೂರು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2012, 7:30 IST
Last Updated 19 ಆಗಸ್ಟ್ 2012, 7:30 IST

ಬಂಗಾರಪೇಟೆ: ವಸತಿ ಯೋಜನೆಯಡಿ ಮಂಜೂರಾಗಿರುವ ಮನೆ ನೋಂದಣಿಗೆ ಪಂಚಾಯಿತಿ ಅಧಿಕಾರಿಗಳು ಮೂರು ಸಾವಿರ ರೂಪಾಯಿ ಹೆಚ್ಚುವರಿ ಹಣ ನೀಡುವಂತೆ ರೈತರನ್ನು ಒತ್ತಾಯಿಸುತ್ತಿದ್ದಾರೆ. ಮನೆ ಕಟ್ಟಲು ಲೈಸೆನ್ಸ್ ಪಡೆಯುವಾಗಲೂ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕ ಅಧ್ಯಕ್ಷ ರಾಮೇಗೌಡ ಆರೋಪಿಸಿದ್ದಾರೆ.

ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈಚೆಗೆ ಹಸಿರು ಸೇನೆ ಪದಾಧಿಕಾರಿಗಳ ಆಯ್ಕೆ ನಡೆದ ಸಂದರ್ಭ ಮಾತನಾಡಿದ ಅವರು, ಈ ಸಂಬಂಧ ತಾಲ್ಲೂಕಿನಾದ್ಯಂಥ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಎಂ.ಲಕ್ಷ್ಮಿನಾರಾಯಣ, ಅಶ್ವಥಪ್ಪ (ಅಧ್ಯಕ್ಷ), ನಾಗೇಶ್ (ಪ್ರಧಾನ ಕಾರ್ಯದರ್ಶಿ), ಮುನಿಶಾಮಪ್ಪ, ನಾಗರಾಜಪ್ಪ, ನಂಜುಂಡಪ್ಪ, ದೇವರಾಜ್ (ಉಪಾಧ್ಯಕ್ಷರು), ನಾರಾಯಣ ಸ್ವಾಮಿ (ಸಂಘಟನಾ ಕಾರ್ಯದರ್ಶಿ), ಎಚ್.ಕೆ.ದೇವರಾಜ್, ರಾಮಚಂದ್ರಪ್ಪ, ನಾರಾಯಣಸ್ವಾಮಿ, ರಾಜ್ ಗೋಪಾಲ್ (ಕಾರ್ಯದರ್ಶಿಗಳು), ಜುತೇಂದರ್ ಸಿಂಗ್ (ಖಜಾಂಚಿ), ಪ್ರಕಾಶ್, ಮುನಿವೆಂಕಟಪ್ಪ, ಶ್ರೀನಿವಾಸ್, ಮಂಜುನಾಥ್, ದೇವರಾಜ್ (ಕಾರ್ಯಕಾರಿ ಸಮಿತಿ ಸದಸ್ಯರು).ಆರ್.ವಿ.ಜಯಂತಿ (ಮಹಿಳ ಘಟಕದ ಅಧ್ಯಕ್ಷೆ), ಜಯಮ್ಮ ಮಹಿಳಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ದೇವರಾಜ ಅರಸು ಜನ್ಮದಿನ ನಾಳೆ
ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 97ನೇ ಜನ್ಮ ದಿನಾಚರಣೆಯನ್ನು ಆ.20ರ ಬೆಳಿಗ್ಗೆ 11 ಗಂಟೆಗೆ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟಿಸಲಿದ್ದಾರೆ. ಸಚಿವ ಆರ್. ವರ್ತೂರು ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.