ಮಾಲೂರು: ತಾಲ್ಲೂಕಿನ ನಲ್ಲಾಂಡಹಳ್ಳಿ ಗ್ರಾಮದಲ್ಲಿ ಬಟ್ಟೆಗೆ ಬಣ್ಣಹಾಕುವ ಕಾರ್ಖಾನೆಯಿಂದ ಬರುವ ತ್ಯಾಜ್ಯ ಮಿಶ್ರಣದ ನೀರು ಸೇವಿಸಿ ಜಾನುವಾರುಗಳು ಅಸುನೀಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜೇನಹಳ್ಳಿ- ತೊರಲಕ್ಕಿ ಮುಖ್ಯರಸ್ತೆಯಲ್ಲಿರುವ ನಲ್ಲಾಂಡಹಳ್ಳಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಕುಟುಂಬಗಳು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜೀವನ ನಿರ್ವಹಿಸುತ್ತಿವೆ. ಕೃಷಿ ಜಮೀನಿನಲ್ಲಿ ತಲೆ ಎತ್ತಿರುವ ತಮಿಳುನಾಡು ಮೂಲದ ಬಟ್ಟೆಗೆ ಬಣ್ಣ ಹಾಕುವ ಕಾರ್ಖಾನೆಯು ಹೊರ ಬಿಡುವ ತ್ಯಾಜ್ಯದ ನೀರ ಕೆರೆಗೆ ಹರಿಯುವ ಮಳೆಯ ನೀರಿನೊಂದಿಗೆ ಬೆರೆತು ಕೆರೆಯಲ್ಲಿ ಸಂಗ್ರಹಗೊಳ್ಳುತ್ತಿದೆ.
ಕಾರ್ಖಾನೆ ಪ್ರಾರಂಭವಾದ ನಂತರ ಕೆರೆಯ ನೀರು ಕೃಷಿ ಚಟುವಟಿಕೆಗಳಿಗೆ ನಿರುಪಯುಕ್ತವಾಗಿದೆ. ಈ ಕುರಿತು ಜಿಲ್ಲಾಧಿಕಾರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ವಿಷಾದಿಸುತ್ತಾರೆ.
ನಾಗೊಂಡಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಕಾರ್ಖಾನೆಯಿಂದ ಆಗುತ್ತಿರುವ ತೊಂದರೆ ಬಗ್ಗೆ ದೂರು ನೀಡಿದ್ದಾರೆ. ಕಾರ್ಖಾನೆ ಕಾರ್ಯನಿರ್ವಹಣೆ ಪರಿಶೀಲಿಸಿ, ಷರತ್ತುಗಳನ್ನು ಉಲ್ಲಂಘಿಸಿದ್ದರೆ ಪರವಾನಗಿ ರದ್ದು ಪಡಿಸಲಾಗುವುದು ಎಂದು ರಾಜೇನಹಳ್ಳಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕೃಷ್ಣಪ್ಪ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.