ADVERTISEMENT

ಮಾಲೂರು: 13 ಜೆಡಿಎಸ್, 10 ಗ್ರಾ.ಪಂ. ಬಿಜೆಪಿ ತೆಕ್ಕೆಗೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2012, 6:27 IST
Last Updated 17 ಡಿಸೆಂಬರ್ 2012, 6:27 IST

ಮಾಲೂರು: ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆದ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಜೆಡಿಎಸ್, ಬಿಜೆಪಿ ಬೆಂಬಲಿಗರು ತಲಾ ಒಂದೊಂದು ಪಂಚಾಯಿತಿಯಲ್ಲಿ ಅಧಿಕಾರ ಹಿಡಿದಿದ್ದಾರೆ.

ಹುಂಗೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಆಡಳಿತಾರೂಢ ಬಿಜೆಪಿ-ಜೆಡಿಎಸ್ ಬೆಂಬಲಿಗರ ಮಧ್ಯೆ ಪ್ರತಿಷ್ಠೆಯಾಗಿದ್ದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಗರಾದ ರಾಧಮ್ಮ ಕಿಟ್ಟಪ್ಪ 9 ಮತ ಪಡೆದು, ತಮ್ಮ ಪ್ರತಿಸ್ಪರ್ಧಿ ಗೌರಮ್ಮ ಅವರನ್ನು ಎರಡು ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.

ಎಚ್.ಎನ್.ಶ್ರೀನಾಥ್ 9 ಮತ ಪಡೆದು ತಮ್ಮ ಪ್ರತಿಸ್ಪರ್ಧಿ ಮಂಜುನಾಥ್‌ರೆಡ್ಡಿ ಅವರನ್ನು ಎರಡು ಮತಗಳ ಅಂತರದಿಂದ ಪರಾಭವಗೊಳಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಡಿವಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ನಾರಾಯಣಮ್ಮ ಲಕ್ಷ್ಮಣ, ಉಪಾಧ್ಯಕ್ಷರಾಗಿ ಟಿ.ಮುನಿರಾಜು ಆಯ್ಕೆಯಾಗಿದ್ದಾರೆ.

ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳ ಪೈಕಿ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಜೆಡಿಎಸ್ ಬೆಂಬಲಿಗರು 13, ಬಿಜೆಪಿ ಬೆಂಬಲಿಗರು 10, ಕಾಂಗ್ರೆಸ್ ಬೆಂಬಲಿಗರು ಎರಡು ಪಂಚಾಯಿತಿಗಳಲ್ಲಿ ಅಧಿಕಾರದ ಚುಕಾಣಿ ಹಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.