ADVERTISEMENT

ಯೋಜನಾ ಆಯೋಗ ತಂಡದಿಢೀರ್ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2012, 7:30 IST
Last Updated 17 ಏಪ್ರಿಲ್ 2012, 7:30 IST

ಕೋಲಾರ: ಕೇಂದ್ರ ಯೋಜನಾ ಆಯೋಗದ ಸದಸ್ಯೆ ಸುನಿತಾ ಸಿಂಘೀ ನೇತೃತ್ವದ ತಂಡದ ಸದಸ್ಯರು ನಗರದ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರಕ್ಕೆ ಸೋಮವಾರ ದಿಢೀರನೆ ಭೇಟಿ ನೀಡಿ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.

ಉದ್ಯೋಗ ವಿನಿಮಯ ಕೇಂದ್ರ ವನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರವನ್ನಾಗಿ ಉನ್ನತೀಕರಿಸಿರುವುದರಿಂದ ಆಗಿರುವ ಪ್ರಯೋಜನಗಳ ಕುರಿತು ಮಾಹಿತಿ ಪಡೆದ ತಂಡದ ಸದಸ್ಯರು, ಇದೊಂದು ಉತ್ತಮ ಯೋಜನೆಯಾಗಿದ್ದು, ರಾಷ್ಟ್ರವ್ಯಾಪಿಯಾಗಿ ವಿಸ್ತರಿಸಲು ಸಲಹೆ ನೀಡುವುದಾಗಿ ತಿಳಿಸಿದರು.

ಕೇಂದ್ರದಲ್ಲಿ ಉದ್ಯೋಗಾಂಕ್ಷಿಗಳ ನೊಂದಣಿ, ಕೌಶಲ್ಯ ಮೌಲ್ಯಾಂಕನ, ಕೌನ್ಸಿಲಿಂಗ್, ಕೌಶಲ್ಯ ತರಬೇತಿ, ಉದ್ಯೋಗ ಮೇಳ ಏರ್ಪಡಿಸುವಿಕೆ, ಉದ್ಯೋಗದ ನೆರವು ಹೀಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ನಿರುದ್ಯೋಗ ಸಮಸ್ಯೆ ನಿವಾರ ಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದರು.

ಇದೇ ವೇಳೆ ನಡೆಯುತ್ತಿದ್ದ ಉದ್ಯೋಗ ಮೇಳದಲ್ಲಿ ನಡೆಯುತ್ತಿದ್ದ ವಿವಿಧ ಚಟುವಟಿಕೆಗಳನ್ನು ಪರಿಶೀಲಿಸಿ, ಅಭ್ಯರ್ಥಿಗಳ ಮೌಲ್ಯಂಕನ ಹಾಗೂ ವಿವಿಧ ಕೌಶಲ್ಯ ತರಬೇತಿ, ಕಂಪ್ಯೂಟರ್ ಶಿಕ್ಷಣ, ಸ್ಪೋಕನ್ ಇಂಗ್ಲೀಷ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಂದ ಮಾಹಿತಿ ಪಡೆದರು.

ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಶ್ರೀರಾಮನ್, ವೃತ್ತಿ ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಕೇಶವಮೂರ್ತಿಯವರು ಕೇಂದ್ರಗಳ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಒದಗಿಸಿದರು. ಇಲಾಖೆ ಜಂಟಿ ನಿರ್ದೇಶಕ ಶಿವಮೂರ್ತಿ, ಸಹಾಯಕ ನಿರ್ದೇಶಕ ವಿ.ವೇಣುಗೋಪಾಲ್, ಉದ್ಯೋಗಾಧಿಕಾರಿ ಕೆ.ಶ್ರೀನಿವಾಸ್, ಮಣಿಪಾಲ್ ಸಂಸ್ಥೆಯ ಡಾ.ಜಗದೀಶ್ ರಾಜನ್, ಪುನಿತ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.